Latest

ಸ್ಯಾಂಡಲ್ ವುಡ್ ನ ಹಿರಿಯ ನಟ ನಿಧನ; ಜನ್ಮ ದಿನದಂದೇ ಸಾವು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡ ಹಿರಿಯ ನಟ, ಪೋಷಕ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದ ಸಿದ್ಧರಾಜ್ ಕಲ್ಯಾಣಕರ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು.

ಸುಮಾರು 70ಕ್ಕೂ ಹೆಚ್ಚು ಸಿನಿಮಾದಲ್ಲಿ ಅಭಿನಯಿಸಿರುವ ಸಿದ್ಧರಾಜ್ ಅವರು, ಮೂಲತಃ ಹುಬ್ಬಳ್ಳಿಯವರಾಗಿದ್ದಾರೆ. ನಿನ್ನೆಯಷ್ಟೇ ಧಾರಾವಾಹಿ ಸೆಟ್‍ವೊಂದರಲ್ಲಿ ತಮ್ಮ 60 ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಆದರೆ ತಡರಾತ್ರಿ ಹೃದಯಾಘಾತವಾಗಿದೆ.

ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದದರೆ. ಹುಬ್ಬಳ್ಳಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಸಿದ್ಧರಾಜ್ ಅವರು ಗಿಣಿರಾಮ ಮತ್ತು ಪ್ರೇಮಲೋಕ ಧಾರಾವಾಹಿಗಳಲ್ಲಿ ಅಭಿನಯಿಸುತ್ತಿದ್ದರು. ಸಿದ್ದರಾಜ್ ತಮ್ಮ ಪತ್ನಿ ಮತ್ತು ಮಗನನ್ನು ಆಗಲಿದ್ದಾರೆ.

Home add -Advt

Related Articles

Back to top button