Latest

ಹಿರಿಯ ನಟ ಶಿವರಾಮ್ ಇನ್ನಿಲ್ಲ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಸ್ಯಾಂಡಲ್ ವುಡ್ ಹಿರಿಯ ನಟ ಶಿವರಾಮ್ ನಿಧನರಾಗಿದ್ದಾರೆ. ಬೆಂಗಳೂರಿನ  ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.

6 ದಿನಗಳ ಹಿಂದೆ ನಟ ಶಿವರಾಮ್ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. ಈ ವೇಳೆ  ಶಿವರಾಮ್ ಗಂಭೀರವಾಗಿ ಗಾಯಗೊಂಡಿದ್ದರು. ಹೊಸಕೆರೆಹಳ್ಳಿಬಳಿಯ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಚೇತರಿಸಿಕೊಂಡಿದ್ದ ಶಿವರಾಮ್ ಮನೆಗೆ ಮರಳಿದ್ದರು. ಆದರೆ ಮನೆಗೆ ಬಂದ ಬಳಿಕ ಅವರಿಗೆ ಮತ್ತೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು, ಹಾಗಾಗಿ ವಾರದ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು.

Home add -Advt

ಈ ಕುರಿತು ಶಿವರಾಮ್ ಪುತ್ರ ರವಿಶಂಕರ್ ಮಾಹಿತಿ ನೀಡಿದ್ದು, ಆಸ್ಪತ್ರೆಯವರು ಎಷ್ಟೇ ಪ್ರಯತ್ನಿಸಿದರೂ ತಂದೆಯವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಎಂದಿದ್ದಾರೆ.

 

ಹಿರಿಯ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ

Related Articles

Back to top button