ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್ ವುಡ್ ಕಲಾ ತಪಸ್ವಿ ಖ್ಯಾತಿಯ ಹಿರಿಯ ನಟ ರಾಜೇಶ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರೆ.
ಬೆಂಗಳೂರಿನ ಕಸ್ತೂರಬಾ ನಗರದ ಖಾಸಗಿ ಆಸ್ಪತ್ರೆಗೆ ರಾಜೇಶ್ ಅವರನ್ನು ದಾಖಲಿಸಲಾಗಿದ್ದು, 90 ವರ್ಷದ ಹಿರಿಯ ನಟನಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಿಡ್ನಿ ವೈಫಲ್ಯ ಹಾಗೂ ವಯೋಸಹಜ ಕಾಯಿಲೆಯಿಂದ ರಾಜೇಶ್ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.
‘ವೀರ ಸಂಕಲ್ಪ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ರಾಜೇಶ್, ಪ್ರಸಿದ್ಧ ನಿರ್ಮಾಪಕ ಬಿ. ಎಸ್. ನಾರಾಯಣ್ ನಿರ್ಮಿಸಿ, ಸಿ.ವಿ. ಶಿವಶಂಕರ್ ಅವರು ನಿರ್ದೇಶಿಸಿದ ‘ನಮ್ಮ ಊರು’ ಚಿತ್ರ ಭರ್ಜರಿ ಯಶಸ್ಸು ಕಂಡಿದ್ದಲ್ಲದೆ ರಾಜೇಶ್ ಅವರಿಗೆ ಅಪಾರ ಜನಪ್ರಿಯತೆಯನ್ನು ತಂದಿತು. ಸುಮಾರು 150ಕ್ಕೂ ಹೆಚ್ಚು ಚಿತ್ರಗಳಲ್ಲಿ ನಾಯಕ ಪ್ರದಾನ ಪಾತ್ರಗಳು ಮತ್ತು ವೈವಿಧ್ಯಮಯ ಪೋಷಕ ಪಾತ್ರಗಳನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ.
‘ನಮ್ಮ ಊರು’, ‘ಗಂಗೆ ಗೌರಿ’, ‘ಸತೀ ಸುಕನ್ಯ’, ಬೆಳುವಲದ ಮಡಿಲಲ್ಲಿ’, ‘ಕಪ್ಪು ಬಿಳುಪು’, ‘ಬೃಂದಾವನ’, ‘ಬೋರೆ ಗೌಡ ಬೆಂಗಳೂರಿಗೆ ಬಂದ’, ‘ಮರೆಯದ ದೀಪಾವಳಿ’, ‘ಪ್ರತಿಧ್ವನಿ’, ‘ಕಾವೇರಿ’, ‘ದೇವರ ಗುಡಿ’, ‘ಬದುಕು ಬಂಗಾರವಾಯ್ತು’, ‘ಸೊಸೆ ತಂದ ಸೌಭಾಗ್ಯ’, ‘ಮುಗಿಯದ ಕಥೆ’, ‘ಬಿಡುಗಡೆ’, ‘ದೇವರದುಡ್ಡು’, ‘ಕಲಿಯುಗ’, ‘ಪಿತಾಮಹ’ ಮುಂತಾದ ಚಿತ್ರಗಳಲ್ಲಿ ರಾಜೇಶರು ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದರು.
ಬೆಳಗಾವಿ: ಮಾಸ್ಕ್ ತೆಗೆಯುತ್ತೇವೆ, ಹಿಜಾಬ್ ತೆಗೆಯಲ್ಲ ಎಂದ ವಿದ್ಯಾರ್ಥಿನಿಯರು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ