ಪ್ರಗತಿವಾಹಿನಿ ಸುದ್ದಿ : ಹಿರಿಯ ಬಿಜೆಪಿ ನಾಯಕ, ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾನಿ ಗುರುವಾರ ತಡರಾತ್ರಿ ಅಸ್ವಸ್ಥತೆಯಿಂದಾಗಿ ಎಐಐಎಂಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅವರ ಆರೋಗ್ಯ ಸ್ಥಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಇತ್ತೀಚಿಗಷ್ಟೇ (ಮಾ. 30 ) ಅವರಿಗೆ ಭಾರತ ರತ್ನ ನೀಡಿ ಗೌರವಿಸಲಾಗಿತ್ತು. 2009 ರಲ್ಲಿ ಪ್ರಧಾನಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅವರು, 15ನೇ ಲೋಕಸಭಾ ಅವಧಿಯಲ್ಲಿ ವಿಪಕ್ಷ ನಾಯಕನಾಗಿ ಕಾರ್ಯ ನಿರ್ವಹಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ