Kannada NewsKarnataka NewsNationalPolitics

*ಹಿರಿಯ ಕಾಂಗ್ರೆಸ್ ನಾಯಕ ಮಾಜಿ ಕೇಂದ್ರ ಸಚಿವ  ಹೆಚ್. ಹನುಮಂತಪ್ಪ ನಿಧನ*

ಪ್ರಗತಿವಾಹಿನಿ ಸುದ್ದಿ: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ರಾಜ್ಯಸಭೆಯ ಮಾಜಿ ಸದಸ್ಯ ಹೆಚ್. ಹನುಮಂತಪ್ಪ (95) ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ಹಿರಿಯ ರಾಜಕಾರಣಿಯಾಗಿದ್ದ ಹನುಮಂತಪ್ಪ ಅವರು ಚಿಕಿತ್ಸೆ ಪಡೆಯುತ್ತಿದ್ದು, ಇಂದು ಕೊನೆಯುಸಿರೆಳೆದಿದ್ದಾರೆ.

Home add -Advt

ಮೃತರ ಪಾರ್ಥಿವ ಶರೀರವನ್ನು ಇಂದು ರಾತ್ರಿ 9 ಗಂಟೆ ಸುಮಾರಿಗೆ ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ರವಾನಿಸಲಾಗುತ್ತದೆ. ಸೋಮವಾರ ಚಿತ್ರದುರ್ಗದ ಮುಕ್ತಿಧಾಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಅವರ ಪುತ್ರ ಜಿ.ಹೆಚ್. ಮೋಹನ್ ತಿಳಿಸಿದ್ದಾರೆ.

ಮೂರು ಬಾರಿ ಸಂಸದ: ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ ಮೂರು ಬಾರಿ ರಾಜ್ಯಸಭಾ ಸದಸ್ಯರಾಗಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು.

ಇಂದಿರಾ ಗಾಂಧಿ ಒಡನಾಟ: ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕರಾಗಿದ್ದ ಇವರು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರೊಂದಿಗೆ ನಿಕಟ ಒಡನಾಟ ಹೊಂದಿದ್ದರು.

ಇವರು ಕೇಂದ್ರ ರೇಷ್ಮೆ ಮಂಡಳಿ (Central Silk Board) ಮಾಜಿ ಅಧ್ಯಕ್ಷರಾಗಿ, ಎಸ್. ನಿಜಲಿಂಗಪ್ಪ ಸ್ಮಾರಕ ಟ್ರಸ್ಟ್‌ನ ಅಧ್ಯಕ್ಷರಾಗಿ ಹಾಗೂ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಹನುಮಂತಪ್ಪ ಅವರ ನಿಧನಕ್ಕೆ ರಾಜಕೀಯ ಹಾಗೂ ಸಾರ್ವಜನಿಕ ವಲಯದ ಗಣ್ಯರು ಸಂತಾಪ ಸೂಚಿಸಿದ್ದು, ಅವರ ಸಾರ್ವಜನಿಕ ಸೇವೆ ಹಾಗೂ ರಾಜಕೀಯ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿದ್ದಾರೆ.

Related Articles

Back to top button