Latest

ಹಿರಿಯ ಕಾಂಗ್ರೆಸ್ ಮುಖಂಡ, ರಾಜ್ಯ ಕುರುಬರ ಸಂಘದ ನಿರ್ದೇಶಕ ಪಿ. ರಾಜಕುಮಾರ್ ನಿಧನ

ಪ್ರಗತಿವಾಹಿನಿ ಸುದ್ದಿ, ದಾವಣಗೆರೆ: ಹಿರಿಯ ಕಾಂಗ್ರೆಸ್ ಮುಖಂಡ, ರಾಜ್ಯ ಕುರುಬರ ಸಂಘದ ನಿರ್ದೇಶಕ ಪಿ. ರಾಜಕುಮಾರ್ (63) ನಿಧನರಾದರು.

ಪ್ರತಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರ ಅತ್ಯಂತ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಅವರಿಗೆ ತಡರಾತ್ರಿ ತೀವ್ರ ಎದೆ ನೋವು ಕಾಣಿಸಿಕೊಂಡಿತು. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲೇ ಅವರು ಮೃತಪಟ್ಟಿದ್ದಾಗಿ ವೈದ್ಯರು ಘೋಷಿಸಿದರು.

ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಬಳಗವಿದೆ.

ದಾವಣಗೆರೆಯ ಜೆ.ಎಚ್. ಪಟೇಲ್ ಬಡಾವಣೆಯ ಅವರ ನಿವಾಸದಲ್ಲಿ ಮಧ್ಯಾಹ್ನ 2 ಗಂಟೆವರೆಗೂ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಾಗಿ ಇರಿಸಲಾಗುತ್ತಿದೆ. ನಂತರ ಻ವರ ಸ್ವಗ್ರಾಮವಾದ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಕುಂಟೆ ಗ್ರಾಮದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುತ್ತಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

Home add -Advt

ರಾಜೀವ್ ಗಾಂಧಿ ಫೌಂಡೇಶನ್ ಲೈಸನ್ಸ್ ರದ್ದು

 

Related Articles

Back to top button