Kannada NewsKarnataka NewsLatest

*ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಈ ಹಿಂದೆ ದಾವಣಗೆರೆ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಭೀಕರ ರಸ್ತೆ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ.

ವಿಜಯಪುರದಿಂದ ಕಲಬುರ್ಗಿಗೆ ತೆರಳುತ್ತಿದ್ದ ವೇಳೆ ಜೇವರ್ಗಿ ಬೈಪಾಸ್ ಬಳಿ ಅವರ ಇನ್ನೋವಾ ಕಾರು ಅಪಘಾತಕ್ಕೀಡಾಗಿತ್ತು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಕಲಬುರ್ಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.

ಈ ಹಿಂದೆ ದಾವಣಗೆರೆ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಮಹಾಂತೇಶ್ ಬೀಳಗಿ ಅವರು ಪ್ರಸ್ತುತ BESCOM ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button