Latest

ಹಿರಿಯ ಪತ್ರಕರ್ತ ಸೀತಾರಾಮ ಭಟ್ ಬೆಳಖಂಡ ನಿಧನ

ಪ್ರಗತಿವಾಹಿನಿ ಸುದ್ದಿ, ಶಿರಸಿ – ಇಲ್ಲಿಯ ಹಿರಿಯ ಪತ್ರಕರ್ತ ಸೀತಾರಾಮ ಭಟ್ ಬೆಳಖಂಡ ಇಂದು ಬೆಳಗ್ಗೆ ನಿಧನರಾದರು. ಅವರಿಗೆ 54 ವರ್ಷ ವಯಸ್ಸಾಗಿತ್ತು.

ಶಿರಸಿಯ ಮುನ್ನಡೆ ಪತ್ರಿಕೆಯಲ್ಲಿ ಹಲವು ವರ್ಷಗಳ ಕಾಲ ಕೆಲಸ ನಿರ್ವಹಿಸಿದ್ದ ಅವರು ಮುನ್ನಡೆ ಪತ್ರಿಕೆ ಪ್ರಕಟಣೆ ನಿಲ್ಲಿಸಿದ ನಂತರ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಈಚೆಗೆ ಅನಾರೋಗ್ಯದಿಂದಾಗಿ ವಿಶ್ರಾಂತ ಜೀವನ ನಡೆಸುತ್ತಿದ್ದರು.

Home add -Advt

ಶಿರಸಿಯ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಾಲಯದ ಧರ್ಮದರ್ಶಿಯಾಗಿಯೂ, ಶಿರಸಿ ಎಪಿಎಂಸಿ ನಿರ್ದೇಶಕರಾಗಿಯೂ ಅವರು ಸೇವೆ ಸಲ್ಲಿಸಿದ್ದರು.

 

Related Articles

Back to top button