Latest

ಹಿರಿಯ ಪತ್ರಕರ್ತ ನಾರಾಯಣ್ ಭಟ್ ಇನ್ನಿಲ್ಲ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡಪ್ರಭ ಪತ್ರಿಕೆಯಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ಹಿರಿಯ ಪತ್ರಕರ್ತ ಎಂ.ಕೆ. ನಾರಾಯಣ ಭಟ್ (78) ಅವರು ಸೋಮವಾರ ವಿಧಿವಶರಾಗಿದ್ದಾರೆ.

ನವಭಾರತ ಪತ್ರಿಕೆಯಲ್ಲಿ ವೃತ್ತಿ ಜೀವನ ಆರಂಭಿಸಿದ್ದ ಭಟ್ಟರು, ನಂತರ ಕನ್ನಡಪ್ರಭ ಪತ್ರಿಕೆ ಸೇರಿ, 2000 ನೇ ಇಸವಿಯಲ್ಲಿ ಉಪ ಸುದ್ದಿ ಸಂಪಾದಕರಾಗಿ (DEPUTY NEWS EDITOR) ನಿವೃತ್ತಿಯಾದರು. ಮೃತರಿಗೆ ಪತ್ನಿ, ಪುತ್ರಿ ಹಾಗೂ ಪುತ್ರ ಇದ್ದಾರೆ‌.

ಸಂತಾಪ:
ಸುದ್ದಿ ಮನೆಯಲ್ಲಿ ಸುಧೀರ್ಘ ಅವಧಿಗೆ ಕ್ರೀಯಾಶೀಲವಾಗಿ ಕಾರ್ಯ ನಿರ್ವಹಣೆ ಮಾಡಿದ್ದ ನಾರಾಯಣ ಭಟ್ಟ ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ)ದ ಅಧ್ಯಕ್ಷರಾದ ಶಿವಾನಂದ ತಗಡೂರು ಅವರು, ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

ಕಾಶಿ ಯಾತ್ರಾರ್ಥಿಗಳಿಗೆ ವಿಶೇಷ ರೈಲು ವ್ಯವಸ್ಥೆ; 5,000 ಸಹಾಯಧನ; ಇಲ್ಲಿದೆ ಸಂಪೂರ್ಣ ಮಾಹಿತಿ

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button