Latest

ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ ಇನ್ನಿಲ್ಲ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿರಿಯ ಪತ್ರಕರ್ತ ಪ್ರಸಾದ್ ಹೆಗಡೆ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕನ್ನಡ ಪತ್ರಿಕೋದ್ಯಮ ವಿಭಾಗದಲ್ಲಿ ಅಪಾರ ಅನುಭಹೊಂದಿದ್ದ ಪ್ರಸಾದ್ ಹೆಗಡೆ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.

ಪ್ರಸಾದ್ ಹೆಗಡೆ ಮೂಲತ: ಉತ್ತರ ಕನ್ನಡ ಜಿಲ್ಲೆಯ ಚವತ್ತಿ ಸಮೀಪದವರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ 4:30ರ ಸುಮಾರಿಗೆ ವಿಧಿವಶರಾಗಿದ್ದಾರೆ.

Home add -Advt

ಪ್ರಸ್ತುತ ರಾಜ್ ನ್ಯೂಸ್ ನಲ್ಲಿ ಔಟ್ ಪುಟ್ ಚೀಫ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪ್ರಸಾದ್ ಹೆಗಡೆ ಅಗಲಿಕೆಯಿಂದ ಕುಟುಂಬ ಶೋಕಸಾಗರದಲ್ಲಿ ಮುಳುಗಿದೆ. ಪ್ರಸಾದ್ ಹೆಗಡೆ ನಿಧನಕ್ಕೆ ಮಾಧ್ಯಮ ಲೋಕದ ಗಣ್ಯರು ಕಂಬನಿ ಮಿಡಿದಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button