ಪ್ರಗತಿವಾಹಿನಿ ಸುದ್ದಿ, ಅಥಣಿ – ಅಥಣಿಯ ಹಿರಿಯ ನಾಯಕ ಕಿರಣಕುಮಾರ ಪಾಟೀಲ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 62 ವರ್ಷ ವಯಸ್ಸಾಗಿತ್ತು.
1 ಬಾರಿ ಅಥಣಿ ಕ್ಷೇತ್ರದಿಂದ ಹಾಗೂ 3 ಬಾರಿ ಕಾಗವಾಡ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧಿಸಿ ಪರಾಭವಗೊಂಡಿದ್ದರು. ಜೈನ ಸಮಾಜದ ಅತ್ಯಂತ ಪ್ರಭಾವಿ ನಾಯಕರಾಗಿ ಅವರು ಗುರುತಿಸಿಕೊಂಡಿದ್ದರು.
ಸಧ್ಯ ಬಿಜೆಪಿ ಜೊತೆ ಗುರುತಿಸಿಕೊಂಡಿದ್ದ ಅವರು, ಶಾಸಕ ಮಹೇಶ ಕುಮಟಳ್ಳಿಯವರನ್ನೂ ಬಿಜೆಪಿಗೆ ಕರೆತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಅಂತ್ಯಕ್ರಿಯೆ ಶುಕ್ರವಾರ ಬೆಳಗ್ಗೆ 8 ಗಂಟೆಗೆ ನಂದಗಾಂವ್ ಗ್ರಾಮದಲ್ಲಿ ನಡೆಯಲಿದೆ.
ಅ. 10 ರಂದು ಜಿತೋ ಸಂಸ್ಥೆಯ ನೂತನ ಪದಾಧಿಕಾರಿಗಳ ಅಧಿಕಾರ ಗ್ರಹಣ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ