
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿರಿಯ ವಿದ್ವಾನ್ ಹಾಗೂ ಆಧ್ಯಾತ್ಮಿಕ ಚಿಂತಕ, ಪ್ರವಚನಕಾರ ಲಕ್ಷ್ಮಣದಾಸ್ ವೇಲಣಕರ್ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲಕ್ಷ್ಮಣದಾಸ ವೇಲಣಕರ್, ತಮ್ಮ ಸ್ವಗೃಹದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಹಾಗೂ ಪುತ್ರ ಹಿಂದೂಸ್ತಾನಿ ಗಾಯಕ ದತ್ತಾತ್ರೆಯ ವೇಲಣಕರ್ ಅವರನ್ನು ಅಗಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದ ಲಕ್ಷ್ಮಣದಾಸ್ ವೇಲಣಕರ್, ಹೆಸರಾಂತ ಹರಿಕಥಾ ವಿಧ್ವಾನ್ ಭದ್ರಗಿರಿ ಅಚ್ಯುತದಾಸ್ ಮತ್ತು ಕೇಶವದಾಸರ ಶಿಷ್ಯರಾಗಿದ್ದರು. ರಾಜ್ಯದಲ್ಲಿ ಹರಿಕಥಾ ಪರಂಪರೆ ಉಳಿಸಿಕೊಡಲು ಹೋಗಲು ಸಾಕಷ್ಟು ಶೃಮಿಸಿದ್ದರು.
ಷಡ್ಜಾ ಕಲಾಕೇಂದ್ರ ಸ್ಥಾಪಿಸಿ ಆಧ್ಯಾತ್ಮಿಕ, ಸಂಗೀತ ಹಾಗೂ ಸಾಹಿತ್ಯ ಸೇವೆಯಲ್ಲಿ ತೊಡಗಿದ್ದರು. ಗೋರಖ್ ಪುರದ ನೂರಕ್ಕೂ ಹೆಚ್ಚು ಆಧ್ಯಾತ್ಮಿಕ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದರು.
ಅಖಂಡ ಕರ್ನಾಟಕದ ಅಭಿವೃದ್ಧಿ ನಿಟ್ಟಿನಲ್ಲಿ ಅಧಿವೇಶನದಲ್ಲಿ ಚರ್ಚೆ ನಡೆಯಲಿ; ಕಾಶಿ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಲಹೆ