ಹಿರಿಯ ಸಂಶೋಧಕ ಡಾ.ಚಿದಾನಂದ ಮೂರ್ತಿ ನಿಧನಕ್ಕೆ ಸಿಎಂ ಸೇರಿದಂತೆ ಗಣ್ಯರ ಸಂತಾಪ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿರಿಯ ಸಾಹಿತಿ, ಸಂಶೋಧಕ ಡಾ.ಚಿದಾನಂದ ಮೂರ್ತಿ ತೀವ್ರಾ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದು, ಚಿ.ಮೂ ನಿದನಕ್ಕೆ ಸಿಎಂ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಟ್ವೀಟರ್ ನಲ್ಲಿ ಸಂತಾಪ ವ್ಯಕ್ತಪಡಿಸಿರುವ ಸಿಎಂ ಬಿ.ಎಸ್​.ಯಡಿಯೂರಪ್ಪ, ಚಿ.ಮೂ ಇನ್ನಿಲ್ಲದ ವಿಷಯ ನೋವಿನದ್ದು ಮತ್ತು ಅವರ ಸ್ಥಾನ ಅನನ್ಯ, ಯಾರೂ ತುಂಬಲಾಗದು ಎಂದು ದುಃಖಿಸಿದ್ದಾರೆ.

ಕನ್ನಡಕ್ಕೆ ಮಿಡಿಯುತ್ತಿದ್ದ, ಲೇಖಕ, ಸಂಶೋಧಕ, ಚಿಂತಕ, ಇತಿಹಾಸಕಾರರಾಗಿದ್ದ ಚಿ.ಮೂ ಇನ್ನಿಲ್ಲದ ವಿಷಯ ನೋವು ತಂದಿದೆ. ಹಂಪಿಯ ಸ್ಮಾರಕಗಳನ್ನು ಉಳಿಸುವಲ್ಲಿ ಹಾಗೂ ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ಸಿಗುವಲ್ಲಿ ಇವರ ಪ್ರಯತ್ನ ಸ್ಮರಣೀಯ. ಅವರಾತ್ಮಕ್ಕೆ ಶಾಂತಿ ದೊರಕಲಿ ಎಂದಿದ್ದಾರೆ.

ಸಚಿವ ವಿ.ಸೋಮಣ್ಣ ಚಿಮೂ ಅವರ ಅಂತಿಮ ದರ್ಶನ ಪಡೆದು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಂಶೋಧಕರು ರಾಜ್ಯದ ಕನ್ನಡಿಗರ ಆರಾಧ್ಯ ದೈವವಾಗಿದ್ದರು. ರಾಜ್ಯದ ಎಲ್ಲಾ ಕಡೆಗಳಲ್ಲಿ ಸಂಶೋಧನೆ ಮಾಡಿದ್ದರು. ತಮಗೆ ಸರಿ ಅನ್ನಿಸದ್ದನ್ನು ಮುಲಾಜಿಲ್ಲದೆ ಹೇಳುತ್ತಿದ್ದರು. ಕನ್ನಡದ ಅಭಿವೃದ್ಧಿಗೆ ಹೋರಾಟ ಮಾಡಿಕೊಂಡು ಬಂದಿದ್ದರು. ಅವರ ಅಗಲಿಕೆ ನಮಗೆಲ್ಲರಿಗೂ ಭರಿಸಲಾಗದ ದುಃಖವಾಗಿದೆ. ಅವರು ನೀಡಿರುವ ಕೊಡುಗೆ ಅಪಾರವಾಗಿದೆ. ಹೀಗಾಗಿ ಸರ್ಕಾರಿ ಸಕಲ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ಮಾಡಿಕೊಡುವಂತೆ ಸಿಎಂಗೆ ಮನವಿ ಮಾಡುತ್ತೇವೆ. ಅವರ ಕುಟುಂಬದ ನಿರ್ಧಾರದಂತೆ ನಾವು ವ್ಯವಸ್ಥೆ ಕಲ್ಪಿಸುತ್ತೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹೇಳಿದ್ದಾರೆ.

ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಸಂತಾಪ ಸೂಚಿಸಿದ್ದು, ಹಿರಿಯ ಸಾಹಿತಿ,ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿ ನಿಧನದ ಸುದ್ದಿ ತಿಳಿದು ದು:ಖವಾಯಿತು. ಅವರ ಸಂಶೋಧನೆ ಮತ್ತು ಸಾಹಿತ್ಯದ‌ ಜೊತೆಯಲ್ಲಿ ಅವರ ನೇರ ನಡೆ-ನುಡಿ, ಸೈದ್ಧಾಂತಿಕ ಭಿನ್ನಾಭಿಪ್ರಾಯವನ್ನು‌ ಮೀರಿದ ಸ್ನೇಹ ಶೀಲ ಗುಣವನ್ನೂ
ನಾಡು ಸದಾ ಸ್ಮರಿಸುತ್ತದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದಿದ್ದಾರೆ

ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಡಾ. ಚಿದಾನಂದಮೂರ್ತಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಟ್ವೀಟ್​ ಮಾಡಿರುವ ಎಚ್​ಡಿಕೆ, ಕನ್ನಡ ನಾಡು ಅಪರೂಪದ ವಿದ್ವಾಂಸರನ್ನು ಕಳೆದುಕೊಂಡಿದೆ. ಚಿಮೂ ಎಂದೇ ಖ್ಯಾತರಾಗಿದ್ದ ಹಿರಿಯ ಜೀವ ನಾಡುನುಡಿಜಲಕ್ಕಾಗಿ ಶ್ರಮಿಸಿದ್ದರು. ಮೃತರ ಕುಟುಂಬ ಸದಸ್ಯರಿಗೆ, ಅವರ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button