Belagavi NewsBelgaum News

ಜೀತ ಪದ್ದತಿ ನಿರ್ಮೂಲನಾ ಕಾರ್ಯಕ್ರಮ


ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಕಾರ್ಮಿಕ ಇಲಾಖೆ ಹಾಗೂ ಸ್ಪಂದನ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ (ಫೆ.೦೯) ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಭಾಂಗಣದಲ್ಲಿ ಜೀತ ಪದ್ದತಿ ನಿರ್ಮೂಲನಾ ಕಾರ್ಯಕ್ರಮ ನಡೆಯಿತು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಪಿ. ಮುರಳಿ ಮೋಹನ್ ರೆಡ್ಡಿ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರತಿಜ್ಞೆ (ಕರ್ನಾಟಕವನ್ನು ಜೀತ ವಿಮುಕ್ತಗೊಳಿಸಲು, ಸಂಕಷ್ಟದಲ್ಲಿರುವ ಸಮುದಾಯಗಳ ಜನರಿಗೆ ನ್ಯಾಯವನ್ನು ಒದಗಿಸಲು ನನ್ನ ಸೇವೆಯನ್ನು ಮುಡುಪಾಗಿಡುತ್ತೇನೆ, ಈ ಮೂಲಕ ಸಮಾನತೆಯನ್ನು ಸಾಧಿಸಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆ ಎಂದು ಈ ಮೂಲಕ ಪ್ರತಿಜ್ಞೆ ಮಾಡುತ್ತೇನೆ) ಯನ್ನು ತೆಗೆದುಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ, ಎಮ್. ಹೊನಕೇರಿ, ಬೆಳಗಾವಿ, ಜಿಲ್ಲಾ ಪಂಚಾಯತ (ಆಡಳಿತ) ಉಪಕಾರ್ಯದರ್ಶಿಗಳು-೧ ರೇಖಾ ಡೊಳ್ಳೆನ್ನವರ, ಬೆಳಗಾವಿ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರಾದ ಎಮ್. ಬಿ. ಅನ್ಸಾರಿ, ವಿನೋದ್ ಕುಮಾರ ಐ.ಜೆ.ಎಮ್, ಬೆಳಗಾವಿ ಕಾರ್ಮಿಕ ಇಲಾಖೆ (ಬಾ.ಕಾ) ಯೋಜನಾ ನಿರ್ದೇಶಕಿ ಜ್ಯೋತಿ ಎಮ್. ಕಾಂತೆ ಉಪಸ್ಥಿತರಿದ್ದರು.
ಸದರಿ ಕಾರ್ಯಕ್ರಮದ ನಂತರ ಜಾಥಾ ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಪಿ. ಮುರಳಿ ಮೋಹನ್ ರೆಡ್ಡಿ ಅವರು ಚಾಲನೆ ನೀಡಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button