
ಪ್ರಗತಿವಾಹಿನಿ ಸುದ್ದಿ: ಕಂಟೈನರ್ ವೊಂದರ ಬ್ರೇಕ್ ಫೇಲ್ ಆಗಿರುವ ಪರಿಣಾಮ ಮುಂಬೈ-ಪುಣೆ ಎಕ್ಸ್ ಪ್ರೆಸ್ ವೇ ನಲ್ಲಿ ಸುಮಾರು 20 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿರುವ ಘಟನೆ ನಡೆದಿದೆ.
ರಾಯಗಢ ಜಿಲ್ಲೆಯ ಖೋಪೋಲಿ ಸಮೀಪದ ಬೋರ್ ಘಾಟ್ ನಲ್ಲಿ ಭೀಕರ ಸರಣಿ ರಸ್ತೆ ಅಪಘಾತ ಸಂಭವಿಸಿದ್ದು ಕಂಟೈನರ್ ವೊಂದರ ಬ್ರೇಕ್ ಫೇಲ್ ಆಗಿದ್ದರಿಂದ ಈ ವೊಂದು ಘಟನೆ ಸಂಭವಿಸಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಮುಂದೆ ಸಾಗುತ್ತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಸುಮಾರು 20 ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ 19 ಕ್ಕೂ ಹೆಚ್ಚು ಜನ ಗಂಭೀರ ಗಾಯಗೊಂಡಿದ್ದಾರೆ.
ಕಂಟೈನರ್ ಲಾರಿ ಬ್ರೇಕ್ ಫೇಲ್ ಆದ ಹಿನ್ನಲೆ ಮುಂದೆ ಸಾಗುತ್ತಿದ್ದ ಕಾರುಗಳಿಗೆ ಡಿಕ್ಕಿ ಹೊಡೆದು ಸಾಗಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಕಾರುಗಳೆಲ್ಲ ನಜ್ಜುಗುಜ್ಜಾಗಿವೆ. ಸದ್ಯ ಅಪಘಾತದಲ್ಲಿ ಗಾಯಗೊಂಡವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಎಲ್ಲರೂ ಕೂಡ ಚಿಕಿತ್ಸೆ ಪಡೆಯುತ್ತಿದ್ದಾರೆ.