Kannada NewsKarnataka News

*ಏರ್ ಪೋರ್ಟ್ ರಸ್ತೆಯಲ್ಲಿ ಸರಣಿ ಅಪಘಾತ: ಇಬ್ಬರು ಸಾವು*

ಪ್ರಗತಿವಾಹಿನಿ ಸುದ್ದಿ: ಸಿಲಿಕಾನ್ ಸಿಟಿ ಬೆಂಗಳೂರಿನ ಏರ್ ಪೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ಭೀಕರತೆಗೆ ಇಬ್ಬರು ಸಾವನಪ್ಪಿದ್ದಾರೆ.

ಯಲಹಂಕ ಮೇಲೇತುವೆ ಮೇಲೆ ಇನೋವಾ ಕಾರಿಗೆ ಮೊದಲು ಸಿಮೆಂಟ್ ಲಾರಿ ಡಿಕ್ಕಿ ಹೊಡೆದಿದೆ. ಹೀಗಾಗಿ ಇಬ್ಬರು ಬಲಭಾಗದಲ್ಲಿ ನಿಲ್ಲಿಸಿಕೊಂಡು ಗಲಾಟೆ ಮಾಡುತ್ತಿದ್ದರು. ಇದೇ ವೇಳೆ ಅತಿ ವೇಗವಾಗಿ ಬಂದ ಬಿಎಂಟಿಸಿ ವೋಲ್ಲೊ ಬಸ್ ಲಾರಿಗೆ ಗುದ್ದಿದೆ. ಈ ವೇಳೆ ಇಬ್ಬರ ದುರ್ಮರಣವಾಗಿದೆ. ಮೃತಪಟ್ಟಿರುವ ವ್ಯಕ್ತಿಗಳ ಗುರುತು ಇನ್ನೂ ಪತ್ತೆಯಾಗಿಲ್ಲ.

Home add -Advt

ಬಸ್‌ನ ಮುಂದಿನ ಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿ ಹೋಗಿದೆ. ಪ್ರಕರಣ ದಾಖಲಿಸಿಕೊಂಡಿರೋ ಯಲಹಂಕ ಸಂಚಾರಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಫೈಓವರ್‌ ಮೇಲೆ ಅಪಘಾತವಾಗಿ ನಿಂತಿರುವ ಕಾರು, ಲಾರಿ ಮತ್ತು ಬಸ್‌ಗಳನ್ನು ಕ್ರೇನ್ ಮೂಲಕ ತೆರವುಗೊಳಿಸಲಾಗಿದೆ.

Related Articles

Back to top button