Latest

ಕಿರುತೆರೆ ನಟಿ ಆತ್ಮಹತ್ಯೆ ಪ್ರಕರಣ; ವಂಚಕ ಪ್ರಿಯಕರನನ್ನು ಬಂಧಿಸಿದ ಪೊಲೀಸರು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರಿಯಕರನಿಂದ ವಂಚನೆಗೊಳಗಾಗಿ ಮೋಸ ಹೋದ ಕಿರುತೆರೆ ನಟಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿ ಪ್ರಿಯಕರನನ್ನು ಬಂಧಿಸಿದ್ದಾರೆ.

ಆರೋಪಿ ದಿನೇಶ್‍ನನ್ನು ಸದ್ದಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಚಂದನಾ (29) ಆತ್ಮಹತ್ಯೆ ಮಾಡಿಕೊಂಡ ನಟಿ. ಚಂದನಾ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ನಂತರ ಆರೋಪಿ ದಿನೇಶ್ ಪರಾರಿಯಾಗಿದ್ದ. ಈತನನ ವಿರುದ್ಧ ಚಂದನಾ ಪೋಷಕರು ದೂರು ದಾಖಲಿಸಿದ್ದರು. ಈ ಕುರಿತು ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನಿಂದ ಪೊಲೀಸರು ಆರೋಪಿ ದಿನೇಶ್‍ಗಾಗಿ ಬಲೆಬೀಸಿದ್ದರು.

Home add -Advt

ಇದೀಗ ಆರೋಪಿ ದಿನೇಶ್ ಚಿಕ್ಕಮಗಳೂರು ಕಾಡಿನಲ್ಲಿ ಸಿಕ್ಕಿಬಿದ್ದಿದ್ದಾನೆ. ಇಷ್ಟು ದಿನ ಆರೋಪಿ ಕಾಡಿನಲ್ಲೇ ತಲೆಮರೆಸಿಕೊಂಡಿದ್ದನು ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ದಿನೇಶ್‍ನನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ತಾವರೆಕೆರೆಯ ಕೃಷ್ಣಮೂರ್ತಿ ಲೇಔಟ್‍ನಲ್ಲಿ ಮೇ 28 ರಂದು ಚಂದನಾ ವಿಷ ಕುಡಿದು ಸೆಲ್ಪಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತ ಚಂದನಾ ಮತ್ತು ದಿನೇಶ್ 5 ವರ್ಷಗಳಿಂದ ಪ್ರೀತಿಸುತ್ತಿದ್ದರು. ಮನೆಯಲ್ಲೂ ಮದುವೆಗೆ ಒಪ್ಪಿದ್ದರು. ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ 5 ಲಕ್ಷ ಹಣವನ್ನು ಪಡೆದುಕೊಂಡಿದ್ದನು. ಅಷ್ಟೇ ಅಲ್ಲದೇ ಆರೋಪಿ ಚಂದನಾರನ್ನು ನಂಬಿಸಿ ದೈಹಿಕ ಸಂಪರ್ಕ ಕೂಡ ಬೆಳೆಸಿದ್ದ. ಅಲ್ಲದೇ ಚಂದನಾರಿಗೆ ಗರ್ಭಪಾತ ಕೂಡ ಮಾಡಿಸಿ, ಬಳಿಕ ಮದುವೆಯಾಗಲು ನಿರಾಕರಿಸಿದ್ದ. ಇದರಿಂದ ಬೇಸತ್ತ ಚಂದನಾ ಆತ್ಮಹತ್ಯೆಗೆ ಶರಣಾಗಿದ್ದಳು.

Related Articles

Back to top button