*ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು: ತಲೆ ಕೆಡಿಸಿಕೊಳ್ಳದ ಮಿನಿಸ್ಟರ್*
ಪ್ರಗತಿವಾಹಿನಿ ಸುದ್ದಿ : ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಮುಂದುವರಿದಿದೆ. ಚಿಕಿತ್ಸಾ ಲೋಪದಿಂದ ಮೂವರು ಬಾಣಂತಿಯರು ಸಾವನ್ನಪ್ಪಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.
ಇಷ್ಟಾಗಿಯೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಮಾತ್ರ ಯಾವುದಕ್ಕೂ ತಲೆ ಕೆಡಿಸಿಕೊಂಡಿಲ್ಲ. ಜಮೀರ್ ಎಲೆಕ್ಷನ್ ಪ್ರಚಾರದಲ್ಲಿ ಬ್ಯುಸಿಯಿದ್ದು, ಜನರ ಕಷ್ಟ ಆಲಿಸದೆ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ನ.9 ರಂದು ಹೆರಿಗೆಗೆ ಬಂದಿದ್ದ ಏಳು ಗರ್ಭಿಣಿಯರು ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಸಿಸೇರಿಯನ್‌ಗೆ ಒಳಗಾಗಿದ್ದರು. ನ.10 ರಂದು ನಂದಿನಿ ಮತ್ತು ಲಲಿತಮ್ಮ ಸಾವನ್ನಪ್ಪಿದ್ದರೆ ನ.13 ರಂದು ರೋಜಮ್ಮ ಮೃತಪಟ್ಟಿದ್ದರು. ಉಳಿದ ನಾಲ್ವರು ಬಾಣಂತಿಯರು ಬಿಮ್ಸ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಯ ಬಗ್ಗೆ ಕೇವಲ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ ಎನ್ನುವ ಸಂದೇಶವನ್ನು ಮಾತ್ರ ಜಮೀರ್ ಕಳುಹಿಸಿದ್ದಾರೆ.
ಆದರೆ ಇಲ್ಲಿ ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಏನು? ಈ ಅವಘಡಕ್ಕೆ ಕಾರಣ ಏನು? ಯಾಕಾಯ್ತು ಎನ್ನುವುದರ ಬಗ್ಗೆ ಆತ್ಮಾವಲೋಕನ ಮಾಡಿಯೇ ಇಲ್ಲ. ಮಹಾರಾಷ್ಟ್ರ ಚುನಾವಣೆಯಲ್ಲಿ ಸಚಿವ ಜಮೀರ್ ಫುಲ್ ಬ್ಯುಸಿಯಾಗಿದ್ದಾರೆ. ಹೀಗಾಗಿ ಸಚಿವರಿಗೆ ಜನರ ಹಿತಕ್ಕಿಂತ ಚುನಾವಣೆಯೇ ಹೆಚ್ಚಾಗಿದ್ದಕ್ಕೆ ಜಿಲ್ಲೆಯಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ