ಪ್ರಗತಿವಾಹಿನಿ ಸುದ್ದಿ; ಪುಣೆ: ಸೀರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆಯಲ್ಲಿ ಸಂಭವಿಸಿರುವ ಅಗ್ನಿ ಆಕಸ್ಮಿಕ ಪ್ರಕರಣದಲ್ಲಿ ಐವರು ಸಾವನ್ನಪ್ಪಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಮಹಾರಾಷ್ಟ್ರದ ಪುಣೆಯಲ್ಲಿರುವ ಸೀರಮ್ ಇನ್ಸ್ ಟಿಟ್ಯೂಟ್ ಸಂಸ್ಥೆಯ ಹೊಸ ಘಟಕದ ಎರಡನೇ ಮಹಡಿಯಲ್ಲಿ ಇಂದು ಮಧ್ಯಹ್ನ 2 ಗಂಟೆಗೆ ಏಕಾಏಕಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಐವರು ಸಾವನ್ನಪ್ಪಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ.
10 ಅಗ್ನಿಶಾಮಕ ವಾಹನ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದೆ. ಆದರೆ ಕಟ್ಟಡದ ತುಂಬ ಭಾರೀ ಹೊಗೆ ಆವರಿಸಿಕೊಂಡಿರುವುದರಿಂದ ಕಟ್ಟಡದಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಗಿದೆ. ಬೆಂಕಿ ದುರಂತಕ್ಕೆ ಕಾರಣ ತಿಳಿದುಬಂದಿಲ್ಲ. ಆದರೆ ಕೋವಿಶೀಲ್ಡ್ ಲಸಿಕೆ ತಯಾರಿಕೆ ಮೇಲೆ ಯಾವುದೇ ತೊಂದರೆಯಿಲ್ಲ ಎಂದು ತಿಳಿದುಬಂದಿದೆ.
ಸೀರಮ್ ಇನ್ಸ್ ಟಿಟ್ಯೂಟ್ ನಲ್ಲಿ ಬೆಂಕಿ ಅವಘಡ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ