
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಯುವ ಹಿನ್ನಲೆಯಲ್ಲಿ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಇಂದು ಸುವರ್ಣವಿಧಾನಸೌಧಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಭಾನುವಾರವೇ ಬೆಳಗಾವಿಗೆ ಆಗಮಿಸಿದ ಅವರು, ಕಲಾಪ ಸುಗಮವಾಗಿ ನಡೆಯುವಂತೆ ವಿಧಾನಸಭೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ಸಲಹೆ-ಸೂಚನೆ ನೀಡಿದರು. ವಿಧಾನಸಭೆ ಸಭಾಂಗಣದಲ್ಲಿ ಪೂರ್ವ ತಯಾರಿಯನ್ನು ವೀಕ್ಷಿಸಿ, ಶಾಸಕರುಗಳ ವಸತಿ ಹಾಗೂ ಕಾನೂನು ಸುವ್ಯವಸ್ಥೆ ಕುರಿತಂತೆ, ಜಿಲ್ಲಾಧಿಕಾರಿಗಳು, ಪೋಲೀಸ್ ವರಿಷ್ಠಾಧಿಕಾಗಳು ಹಾಗೂ ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ನಂತರದಲ್ಲಿ ಅಧಿವೇಶನದ ಭದ್ರತೆಗಾಗಿ ನಿಯೋಜಿಸಲ್ಪಟ್ಟ ಪೊಲೀಸ್ ಸಿಬ್ಬಂದಿಗಳಿಗೆ ನಿರ್ಮಿಸಿದ ತಾತ್ಕಾಲಿಕ ವಸತಿ ವ್ಯವಸ್ಥೆಯನ್ನು ಸಹ ಅವರು ವೀಕ್ಷಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ