ಪ್ರಗತಿವಾಹಿನಿ ಸುದ್ದಿ, ನವದೆಹಲಿ – ಬೆಳಗಾವಿಯಲ್ಲಿ ಫೇಸ್ ಲೆಸ್ ಅಸೆಸ್ ಮೆಂಟ್ ಸ್ಕೀಂ ಮತ್ತು ರೀಜನಲ್ ಇ ಅಸೆಸ್ ಮೆಂಟ್ ಸೆಂಟರ್ ಆರಂಭಿಸುವಂತೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಒತ್ತಾಯಿಸಿದ್ದಾರೆ.
ಶುಕ್ರವಾರ ನವದೆಹಲಿಯಲ್ಲಿ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿದ ಅಂಗಡಿ, ಬೆಳಗಾವಿಯಲ್ಲಿ ಇ ಅಸೆಸ್ ಮೆಂಟ್ ಸೆಂಟರ್ ಸ್ಥಾಪನೆಯ ಅಗತ್ಯತೆ ಮತ್ತು ಮಹತ್ವದ ಕುರಿತು ಮನವರಿಕೆ ಮಾಡಿದರು.
ಈ ಕುರಿತು ಪರಿಶೀಲನೆ ನಡೆಸುವುದಾಗಿ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ ಎಂದು ಅಂಗಡಿ ಟ್ವೀಟ್ ಮಾಡಿದ್ದಾರೆ.
ಬೆಳಗಾವಿಯಲ್ಲಿರುವ ಆದಾಯ ತೆರಿಗೆ ಇಲಾಖೆಯ ಆಯುಕ್ತರ ಕಚೇರಿಯನ್ನು ಹುಬ್ಬಳ್ಳಿಗೆ ಸ್ಥಳಾಂತರಿಸಿ ಅಲ್ಲಿ ಇ ಅಸೆಸ್ ಮೆಂಟ್ ಸೆಂಟರ್ ಸ್ಥಾಪಿಸುವ ಪ್ರಕ್ರಿಯೆ ನಡೆಯುತ್ತಿರುವುದು ಇಲ್ಲಿ ಉಲ್ಲೇಖನೀಯ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ