*ಬೆಳಗಾವಿಯಲ್ಲಿ ‘ಸೇವಾ ಜ್ಯೋತಿ ಯಾತ್ರೆ: ಸಾವಿರಾರು ಕಾರ್ಯಕರ್ತರಿಂದ ಸ್ವಾಗತ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ 25 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿರುವ ‘ಸೇವಾ ಜ್ಯೋತಿ ಯಾತ್ರೆ’ ಬೆಳಗಾವಿಗೆ ಆಗಮಿಸಿತು.
ಬೆಳಗಾವಿ ಗ್ರಾಮಾಂತರ, ಬೆಳಗಾವಿ ಮಹಾನಗರ ಹಾಗೂ ಚಿಕ್ಕೋಡಿ ಸಂಘಟನಾತ್ಮಕ ಜಿಲ್ಲೆಗಳ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಯಾತ್ರೆಯನ್ನು ಅದ್ದೂರಿಯಾಗಿ ಸ್ವಾಗತಿಸಿದರು.
ಇದೇ ಸಂದರ್ಭದಲ್ಲಿ ಆಯೋಜಿಸಿದ್ದ ‘ವಿಕಸಿತ ಭಾರತ ಸಂಕಲ್ಪ ಸಮಾವೇಶ’ದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣದ ನೇರಪ್ರಸಾರವನ್ನು ಎಲ್ಇಡಿ ಪರದೆಯ ಮೂಲಕ ಸಾವಿರಾರು ಕಾರ್ಯಕರ್ತರು ವೀಕ್ಷಿಸಿದರು. ಕಾರ್ಯಕ್ರಮದ ವೇಳೆ ನೂತನವಾಗಿ ನಿರ್ಮಿಸಿರುವ ‘ಸೇವಾ ಜ್ಯೋತಿ ವೃತ್ತ’ವನ್ನು ಮುಖಂಡರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಸಂಸದ ಜಗದೀಶ ಶೆಟ್ಟರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ಶಾಸಕರಾದ ಅಭಯ ಪಾಟೀಲ, ವಿಠ್ಠಲ ಹಲಗೇಕರ, ದುರ್ಯೋಧನ ಐಹೊಳೆ, ಮಾಜಿ ಸಂಸದ ಈರಣ್ಣ ಕಡಾಡಿ, ಮಾಜಿ ಶಾಸಕರಾದ ಸಂಜಯ ಪಾಟೀಲ, ಅನಿಲ ಬೆನಕೆ, ಮಹಾಂತೇಶ ದೊಡಗೌಡರ, ಮಹಾಂತೇಶ ಕವಟಗಿಮಠ, ಅರವಿಂದ ಪಾಟೀಲ, ಮಹೇಶ ಕುಮಠಳ್ಳಿ ಸೇರಿದಂತೆ ಬಿಜೆಪಿ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



