*ಫಲಾನುಭವಿಗಳಿಗೆ ಉಚಿತ ಉಜ್ವಲ ಗ್ಯಾಸ್ ವಿತರಣೆ, ಸಂಧ್ಯಾ ಸುರಕ್ಷಾ ಪಿಂಚಣಿ ಯೋಜನೆ ಆದೇಶ ಪತ್ರ ಹಾಗೂ ಆಯುಷ್ಮಾನ್ ಕಾರ್ಡ್ ವಿತರಿಸಿದ ಸಂಸದ ಅಣ್ಣಾಸಾಹೇಬ ಜೊಲ್ಲೆ*

ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಲೋಕಸಭಾ ವ್ಯಾಪ್ತಿಯ ಯಕ್ಸಂಬಾ ಪಟ್ಟಣದ ಜ್ಯೋತಿಬಾ ಮಂದಿರದ ಆವರಣದಲ್ಲಿ ಭಾರತೀಯ ಜನತಾ ಪಕ್ಷದ ಚಿಕ್ಕೋಡಿ-ಸದಲಗಾ ಮಂಡಲ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ “ಸೇವಾ ಪಾಕ್ಷಿಕ” ಅಭಿಯಾನದಡಿ ಫಲಾನುಭವಿಗಳಿಗೆ ಉಚಿತ ಉಜ್ವಲಾ ಗ್ಯಾಸ್ ವಿತರಣೆ, ಸಂಧ್ಯಾ ಸುರಕ್ಷಾ ಪಿಂಚಣಿ ಯೋಜನೆ ಆದೇಶ ಪತ್ರ ಹಾಗೂ ಆಯುಷ್ಮಾನ್ ಕಾರ್ಡ್ ಗಳನ್ನು ಸಂಸದ ಅಣ್ಣಾಸಾಹೇಬ ಜೊಲ್ಲೆ ವಿತರಿಸಿದರು.
ಇದಕ್ಕೂ ಮೊದಲು ಕುಲದೇವರಾದ ಶ್ರೀ ಜ್ಯೋತಿರ್ಲಿಂಗ ಮಂದಿರದಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಂಸದ ಅಣ್ಣಾಸಾಹೇಬ ಜೊಲ್ಲೆ ವಿಶೇಷ ಪೂಜೆ ಸಲ್ಲಿಸಿ, ಪ್ರಧಾನಿ ಮೋದಿ ಅವರಿಗೆ ದೇವರು ಉತ್ತಮ ಆಯುರಾರೋಗ್ಯ, ಯಶಸ್ಸು ಮತ್ತು ಇನ್ನಷ್ಟು ಜನಸೇವೆ ಮಾಡುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದರು.

ಈ ವೇಳೆ ಮಾತನಾಡಿದ ಸಂಸದ ಅಣ್ಣಾಸಾಹೇಬ ಜೊಲ್ಲೆ, ಹಗಲಿರುಳು ಎನ್ನದೆ ದೇಶದ ಶ್ರೇಯೋಭಿವೃದ್ಧಿಗಾಗಿ ಸೇವೆ ಸಲ್ಲಿಸುತ್ತಿರುವ ರಾಷ್ಟ್ರಸೇವಕ, ಭವ್ಯ ಭಾರತದ ಕನಸುಗಾರ ನಮ್ಮ ಪ್ರಧಾನಿಗಳವರ ಜನ್ಮದಿನವನ್ನು ದೇಶದಾದ್ಯಂತ ಭಾರತೀಯ ಜನತಾ ಪಕ್ಷದ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲಾಗುತಿದ್ದು, “ಸೇವಾ ಪಾಕ್ಷಿಕ ” ಅಭಿಯಾನದಡಿ ಸೇವೆ ಸಮರ್ಪಿಸಲಾಗುತ್ತಿದೆ.
ಈ ಸಂದರ್ಭದಲ್ಲಿ ಚಿಕ್ಕೋಡಿ ಬಿಜೆಪಿ ಜಿಲ್ಲಾಧ್ಯಕ್ಷ ರಾಜೇಶ ನೇರ್ಲಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತೀಶ ಅಪ್ಪಾಜಿಗೋಳ, ಚಿಕ್ಕೋಡಿ ಸದಲಗಾ ಮಂಡಲ ಅಧ್ಯಕ್ಷ ಸಂಜಯ ಪಾಟೀಲ, ಮಂಡಲ ಪ್ರಧಾನ ಕಾರ್ಯದರ್ಶಿ ಪವನ ಮಹಾಜನ, ಚಿಕ್ಕೋಡಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ದೀಪಕ ಪಾಟೀಲ, ವಿಕಾಸ ಪಾಟೀಲ, ಸುಭಾಷ ಚೌಗಲಾ, ಸ್ಥಳೀಯ ಮುಖಂಡರು ಗಣ್ಯರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ