Latest

ನಾಳೆಯಿಂದಲೇ ಅರ್ಜಿ ಸ್ವೀಕಾರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೋವಿಡ್ ನಿಯಂತ್ರಣೆಕ್ಕೆ ಜಾರಿಯಾಗಿರುವ ಲಾಕ್ ಡೌನ್ ನಿಂದ ತೊಂದರೆಗೀಡಾಗಿರುವ ಅರ್ಹ ಆಟೋ-ಟ್ಯಾಕ್ಸಿ ಮತ್ತು ಕ್ಯಾಬ್ ಚಾಲಕರಿಗೆ ತಲಾ ಮೂರು ಸಾವಿರ ರೂಪಾಯಿಯಷ್ಟು ಆರ್ಥಿಕ ಸಹಾಯ ನೀಡಲು ಸರ್ಕಾರ ನಿರ್ಧರಿಸಿದಂತೆ ಸಾರಿಗೆ ಇಲಾಖೆಯಿಂದ ಪರಿಹಾರ ವಿತರಿಸಲು ವ್ಯವಸ್ಥೆ ಮಾಡಲಾಗಿದೆ. ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ವೆಬ್ ಪೋರ್ಟಲ್ ಮೂಲಕ ಸೂಕ್ತ ದಾಖಲೆಗಳನ್ನು ಒದಗಿಸಿ ಈ ಪರಿಹಾರ ಧನ ಪಡೆದುಕೊಳ್ಳಲು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಉಪ ಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ.

ನಾಳೆ (ಮೇ 27) ಮಧ್ಯಾಹ್ನದಿಂದ ಅರ್ಜಿ ಸ್ವೀಕಾರ ಪ್ರಕ್ರಿಯೆ ಪ್ರಾರಂಭವಾಗುವುದು. ಹೀಗೆ ಅರ್ಜಿ ಸಲ್ಲಿಸಿದ ಸೂಕ್ತ ಫಲಾನುಭವಿಗಳ ಅಕೌಂಟ್ ಗಳಿಗೆ ನೇರವಾಗಿ ಈ ಪರಿಹಾರ ಧನವನ್ನು ವರ್ಗಾಯಿಸಲಾಗುವುದು. ಬಡ ಚಾಲಕರ ನೆರವಿಗೆ ಮುಂದಾಗಿರುವ ನಮ್ಮ ಸರ್ಕಾರದ ಸೌಲಭ್ಯವನ್ನು ಸದುಪಯೋಗಪಡೆದುಕೊಳ್ಳಬೇಕು ಎಂದು ಸವದಿ ಮನವಿ ಮಾಡಿದ್ದಾರೆ

ಕಳೆದ ಬಾರಿಯೂ ಲಾಕ್ ಡೌನ್ ಘೋಷಿಸಿದ ಸಂದರ್ಭದಲ್ಲಿ ಸಾರಿಗೆ ಇಲಾಖೆಯಿಂದ ಲಕ್ಷಾಂತರ ಮಂದಿ ಅರ್ಹ ಚಾಲಕರಿಗೆ ಪರಿಹಾರಧನವನ್ನು ವಿತರಿಸಲಾಗಿತ್ತು ಎಂಬುದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button