Belagavi NewsBelgaum NewsKannada NewsKarnataka NewsNationalPolitics

ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ದೇಶದಲ್ಲಿ ಏಳು ದಿನ ಶೋಕಾಚರಣೆ

ಪ್ರಗತಿವಾಹಿನಿ ಸುದ್ದಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಗೌರವಾರ್ಥ ದೇಶದಲ್ಲಿ 7 ದಿನಗಳ ಶೋಕಾಚರಣೆ ಮಾಡುವುದಾಗಿ ಭಾರತ ಸರ್ಕಾರ ಘೋಷಿಸಿದೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಗುರುವಾರ ರಾತ್ರಿ (ಡಿ.26) ದೆಹಲಿಯ ಏಮ್ಸ್ ನಲ್ಲಿ ನಿಧನರಾದರು

ಸಿಂಗ್‌ರವರ ನಿಧನದ ಹಿನ್ನೆಲೆಯಲ್ಲಿ ಶುಕ್ರವಾರ ನಿಗದಿಯಾಗಿದ್ದ ಎಲ್ಲಾ ಕೇಂದ್ರ ಸರ್ಕಾರದ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದ್ದು, ಸಿಂಗ್ ಅವರ ನಿಧನಕ್ಕೆ ಸಂತಾಪ ಸೂಚಿಸಲು ಕೇಂದ್ರ ಸಚಿವ ಸಂಪುಟ ಸಭೆ ಸೇರಲಿದೆ.

ದೇಶದೆಲ್ಲೆಡೆ ಶೋಕಾಚರಣೆ ನಡೆಯಲಿದ್ದು ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಏಳು ದಿನಗಳ ಶೋಕಾಚರಣೆಯನ್ನು ಘೋಷಿಸಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದ್ದು ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ‌

Home add -Advt

Related Articles

Back to top button