ಪ್ರಗತಿ ವಾಹಿನಿ ಸುದ್ದಿ ಮುಂಬೈ
ಕರ್ನಾಟಕವೂ ಸೇರಿದಂತೆ ದೇಶದ ಬಹುತೇಕ ರಾಜ್ಯಗಳಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ನಡುವೆ ಕಳೆದ ೧೫ ದಿನಗಳಲ್ಲಿ ಬಿಸಿಲಿನ ತಾಪಕ್ಕೆ ಏಳು ಜನ ಮೃತಪಟ್ಟಿದ್ದು ೫೯ ಜನ ಸನ್ ಸ್ಟ್ರೋಕ್‌ಗೆ ತುತ್ತಾಗಿದ್ದಾರೆ ಎಂದು ಮಹಾರಾಷ್ಟ್ರ ಆರೋಗ್ಯ ಇಲಾಖೆ ವರದಿಯಲ್ಲಿ ತಿಳಿಸಿದೆ.
ಮಹಾರಾಷ್ಟ್ರದ ವಿದರ್ಭ ಮತ್ತು ಸೆಂಟ್ರಲ್ ಮಹಾರಾಷ್ಟ್ರದಲ್ಲಿ ಬಿಸಿ ಗಾಳಿ ಬೀಸುತ್ತಿದ್ದು ಬಹುತೇಕ ಜಿಲ್ಲೆಗಳಲ್ಲಿ ತಾಪಮಾನ ಸಾಮಾನ್ಯ ಮಟ್ಟಕ್ಕಿಂತ ಹೆಚ್ಚಾಗಿದೆ.
ಮಹಾರಾಷ್ಟ್ರದ ಅಕೋಲಾದಲ್ಲಿ ಪ್ರಸ್ತ ಬೇಸಿಗೆಯಲ್ಲಿ ಆ ರಾಜ್ಯದ ಗರಿಷ್ಟ ಉಷ್ಣತೆ ದಾಖಲಾಗಿದೆ. ಅಕೋಲಾದಲ್ಲಿ ೪೪ ಡಿ.ಸೆಲ್ಸಿಯಸ್ ಉಷ್ಣತೆ ದಾಖಲಾಗಿದೆ.
ಮಹಾರಾಷ್ಟ್ರದಲ್ಲಿ ಕಳೆದ ೪ ವರ್ಷಗಳಲ್ಲಿ ಬಿಸಿಲಿನ ಝಳಕ್ಕೆ ಒಟ್ಟು ೪೩ ಸಾವು ಸಂಭವಿಸಿದೆ.
ಲುಂಗಿ ಡ್ಯಾನ್ಸ್ ಖ್ಯಾತಿಯ ಯೋ ಯೋ ಹನಿಸಿಂಗ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ