National

*ಒಂದೇ ಕುಟುಂಬದ ಏಳು ಜನ ಆತ್ಮಹತ್ಯೆಗೆ ಶರಣು…?*

ಪ್ರಗತಿವಾಹಿನಿ ಸುದ್ದಿ : ಹರಿಯಾಣದ ಪಂಚಕುಲ ನಗರದ ಸೆಕ್ಟರ್ 27 ರಲ್ಲಿ ಮನೆಯ ಹೊರಗೆ ರಸ್ತೆಯ ಮೇಲೆ ನಿಲ್ಲಿಸಿದ್ದ ಕಾರಿನಲ್ಲಿ ಏಳು ಜನ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಅಧಿಕ ಸಾಲ ಮತ್ತು ಆರ್ಥಿಕ ಬಿಕ್ಕಟ್ಟಿನ ಹಿನ್ನಲೆ ಒಂದೇ ಕುಟುಂಬದ ಏಳು ಜನ ಕಾರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತಪಡಿಸಲಾಗಿದೆ.

ಮೃತರಲ್ಲಿ ಡೆಹ್ರಾಡೂನ್ ನಿವಾಸಿ ಪ್ರವೀಣ್ ಮಿತ್ತಲ್ (42), ಪ್ರವೀಣ್ ಅವರ ಪೋಷಕರು, ಪ್ರವೀಣ್‌ ಅವರ ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳು ಮತ್ತು ಒಬ್ಬ ಮಗ ಎಂದು ಗುರುತಿಸಲಾಗಿದೆ. ಅತಿಯಾದ ಸಾಲ, ಆರ್ಥಿಕ ಬಿಕ್ಕಟ್ಟು, ಹಾಗೂ ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮನೆಯ ಹೊರಗೆ ರಸ್ತೆಯ ಮೇಲೆ ನಿಲ್ಲಿಸಿದ್ದ ಕಾರಿನಲ್ಲಿ ಏಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಇದನ್ನು ಗಮನಿಸಿದ ದಾರಿಹೋಕರು ಕೂಡಲೇ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸದ್ಯ ಏಳು ಜನರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದು, ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಾರಿನಲ್ಲಿ ಡೆತ್ ನೋಟ್ ಕೂಡ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button