Belagavi NewsBelgaum NewsEducationKannada NewsKarnataka News

*ವಸತಿ ಶಾಲೆ ಪ್ರವೇಶ: 6ನೇ ತರಗತಿಗಳ ಪ್ರವೇಶಾತಿಗೆ ಅವಧಿ ವಿಸ್ತರಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಬೆಳಗಾವಿ ಜಿಲ್ಲೆಯಲ್ಲಿ ನಡೆಸಲಾಗುತ್ತಿರುವ 2026-27 ನೇ ಸಾಲಿನ ಮೊರಾರ್ಜಿ ದೇಸಾಯಿ, ಕಿತ್ತೂರ ರಾಣಿ ಚನ್ನಮ್ಮ, ಡಾ. ಬಿ ಆರ್ ಅಂಬೇಡ್ಕರ್, ಇಂದಿರಾ ಗಾಂಧಿ ವಸತಿ ಶಾಲೆಗಳ 6ನೇ ತರಗತಿಗಳಿಗೆ ಪ್ರವೇಶಾತಿಗಾಗಿ ಹತ್ತಿರದ ವಸತಿ ಶಾಲೆ/ಕಾಲೇಜಗಳ ಮೂಕಲ ಅರ್ಜಿ ಸಲ್ಲಿಸಲು ಫೆ.7ರ ವರೆಗೆ ವಿಸ್ತರಿಸಲಾಗಿದೆ.

ಪರಿಶಿಷ್ಟ ಜಾತಿಗೆ ಸೇರಿದ ಒಳಮಿಸಲಾತಿ ಕಲ್ಪಿಸಿರುವ ಪ್ರವರ್ಗ ಎ.ಬಿ ಹಾಗೂ ಸಿ ಅಭ್ಯರ್ಥಿಗಳು ಅರ್ಜಿ ಸಂಖ್ಯೆಯೊಂದಿಗೆ ತಮ್ಮ ಹತ್ತಿರದ ವಸತಿ ಶಾಲೆಗಳ ಮೂಲಕ ಆನ್ ಲೈನ್ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ವಸತಿ ಶಾಲೆಗಳ ಪ್ರಾಂಶುಪಾಲರನ್ನು ಸಂಪರ್ಕಿಸಬಹುದಾಗಿದೆ.ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಪ್ರಕಟನೆಯಲ್ಲಿ ಪ್ರಕಟಿಸಿರುತ್ತಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button