*ಪೊಲೀಸ್ ಕಮಿಷನರ್ ಸೇರಿ ಹಲವು ಅಧಿಕಾರಿಗಳ ಅಮಾನತು* *ಸಿಐಡಿ, ಏಕ ಸದಸ್ಯ ಆಯೋಗದಿಂದ ದುರ್ಘಟನೆ ತನಿಖೆ* *3 ಸಂಘಟನೆಗಳ ಪ್ರತಿನಿಧಿಗಳ ಬಂಧನಕ್ಕೆ ಆದೇಶ* : ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಆರ್ ಸಿಬಿ ವಿಜಯೋತ್ಸವದ ವೇಳೆ ನಡೆದ ದುರ್ಘಟನೆಗೆ ಸಂಬಂಧಿಸಿದಂತೆ ಸರಕಾರ ಹಲವು ಗಂಭೀರ ಕ್ರಮಗಳನ್ನು ತೆಗೆದುಕೊಂಡಿದೆ.
ಪೊಲೀಸ್ ಕಮಿಷನರ್ ಸೇರಿದಂತೆ ಹಲವು ಅಧಿಕಾರಿಗಳ ಅಮಾನತಿಗೆ ಸರಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ಸಂಜೆ ನಡೆದ ಸಚಿವಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ ನಿರ್ಧರಿಸಲಾಗಿದೆ. ತನಿಖೆಗೆ ಜಸ್ಟೀಸ್ ಮೈಕೆಲ್ ಕುಲಾ ನೇತೃತ್ವದಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಲಾಗಿದೆ.
ಜೊತೆಗೆ, ತನಿಖೆಯನ್ನು ಸಿಐಡಿಗೆ ಸಹ ವಹಿಸಲಾಗಿದೆ.
ಆರ್ ಸಿ ಬಿ ಮೇಲೆ, ಇವೆಂಟ್ ಮ್ಯಾನೇಜರ್ ಮೇಲೆ, ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಶನ್ ಮೇಲೆ ಪ್ರಕರಣ ದಾಖಲು, ಅವರ ಬಂಧನಕ್ಕೆ ಆದೇಶ ನೀಡಲಾಗಿದೆ.
ಕಬ್ಬನ್ ಪಾರ್ಕ್ ಠಾಣೆಯ ಇನಸ್ಪೆಕ್ಟರ್, ಎಸಿಪಿ, ಸೆಂಟ್ರಲ್ ಡಿಸಿಪಿ, ಕ್ರಿಕೆಟ್ ಸ್ಟೇಡಿಯಂ ಇನ್ ಚಾರ್ಜ್, ಹೆಚ್ಚುವರಿ ಪೊಲೀಸ್ ಆಯುಕ್ತ, ಪೊಲೀಸ್ ಕಮಿಷನರ್ ತಕ್ಷಣದಿಂದ ಅಮಾನತು ಮಾಡಲು ಆದೇಶ ನೀಡಲಾಗಿದೆ.
ಇಂತಹ ದುರ್ಘಟನೆ ನಾನು ರಾಜಕೀಯಕ್ಕೆ ಬಂದ ನಂತರ ಯಾವಾಗಲೂ ನಡೆದಿರಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಘಟನೆ ತೀವ್ರ ನೋವುಂಟು ಮಾಡಿದೆ. ನಡೆಯಬಾರದ ಘಟನೆ ನಡೆದುಹೋಗಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮ್ಮೇಳನಸಭಾಂಗಣದಲ್ಲಿ ನಡೆಸಿದ ಸುದ್ದಿಗೋಷ್ಠಿಯ ಮುಖ್ಯಾಂಶಗಳು:
· ಆರ್ ಸಿ ಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ದು:ಖಕರವಾಗಿದ್ದು, ಮೃತಪಟ್ಟವರಿಗೆ ಸಂತಾಪ ಕೋರಲಾಯಿತು. ಇಂದು ಎಂದಿನಂತೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಷಯದ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ನಿನ್ನೆ ನಡೆದ ಅಹಿತಕರ ಘಟನೆ ಬಗ್ಗೆ ಚರ್ಚಿಸಿ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.
· ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ಜಸ್ಟೀಸ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ.
· ಆರ್ ಸಿ ಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್ ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿದೆ. ಇವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
· ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸಪೆಕ್ಞರ್ ಸೇರಿದಂತೆ ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ , ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ರನ್ನು ತಕ್ಷಣದಿಂದ ಅಮಾನತ್ತು ಗೊಳಿಸಲು ತೀರ್ಮಾನಿಸಲಾಗಿದೆ. ಈ ದುರಂತಕ್ಕೆ ಸಂಬಂಧಪಟ್ಟ ಚರ್ಚೆಯ ನಂತರ ತೆಗೆದುಕೊಂಡ ತೀರ್ಮಾನಗಳಾಗಿವೆ. ಉಪಮುಖ್ಯಮಂತ್ರಿಗಳು, ಗೃಹಸಚಿವರು, ಸಚಿವರಾದ ಎಚ್.ಕೆ.ಪಾಟೀಲ್, ಸುಧಾಕರ್ , ಮಹಾದೇವಪ್ಪ ಸೇರಿದಂತೆ ಅಧಿಕಾರಿಗಳು ಚರ್ಚೆಯಲ್ಲಿ ಭಾಗವಹಿಸಿದ್ದರು.
· ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡುಬರುತ್ತಿದ್ದು, ಇವರುಗಳನ್ನು ಅಮಾನತ್ತುಗೊಳಿಸಲು ತೀರ್ಮಾನಿಸಲಾಗಿದೆ.
· ನಾನು ಶಾಸಕರು, ಸಚಿವ, ಡಿಸಿಎಂ ಹಾಗೂ ಮುಖ್ಯಮಂತ್ರಿಯಾದ ನಂತರ ಇಂತಹ ಘಟನೆ ನಡೆದಿರಲಿಲ್ಲ. ಈ ಘಟನೆ ನಮ್ಮನ್ನು ಘಾಸಿಗೊಳಿಸಿದೆ.
· ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬದವರ ಜೊತೆ ಸರ್ಕಾರವಿದೆ.
ನಿನ್ನೆ ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಮೂರು ಸಂಸ್ಥೆಗಳು ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.
The suspended officers include:
B. Dayanand – Commissioner of Police, Bengaluru City
Vikas Kumar – Additional Commissioner of Police, West Division
Shekhar – Deputy Commissioner of Police (Central Division)
Balakrishna – ACP, Cubbon Park Division
Girish – Inspector, Cubbon Park Police Station