Belagavi NewsBelgaum NewsKannada NewsKarnataka NewsLatestPolitics

*ಹೊಲಿಗೆ ಯಂತ್ರಗಳನ್ನು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಡಿ. ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ 2024-25 ನೇ ಸಾಲಿನ ಯೋಜನೆಯಡಿಯಲ್ಲಿ ಆಯ್ಕೆಯಾದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಅರ್ಹ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆಲಕ್ಷ್ಮೀ ಹೆಬ್ಬಾಳಕರ್ ಶುಕ್ರವಾರ ಹೊಲಿಗೆ ಯಂತ್ರಗಳನ್ನು ವಿತರಿಸಿದರು.

ಸಚಿವರ ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಒಟ್ಟೂ 18 ಲಾನುಭವಿಗಳಿಗೆ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಮಹಿಳೆಯರ ಆರ್ಥಿಕ ಸ್ವಾವಲಂಬನೆಯ ಉದ್ದೇಶದಿಂದ ವಿವಿಧ ಸಾಮಗ್ರಿಗಳನ್ನು ವಿತರಿಸಲಾಗುತ್ತಿದ್ದು, ಅವರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರಲಿ ಎಂದು ಸಚಿವರು ಆಶಿಸಿದರು.


ಕಾಡಾ ಅಧ್ಯಕ್ಷ ಯುವರಾಜ ಕದಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೆಶಕ ಚೇತನ್ ಕುಮಾರ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಯಶವಂತ, ತಹಸಿಲ್ದಾರ ಬಸವರಾಜ ನಾಗರಹಾಳ, ಉಚಗಾಂವ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಳು ದೇಸೂರಕರ್ ಮೊದಲಾದವರಿದ್ದರು.

Home add -Advt

Related Articles

Back to top button