Latest

ಶಿರಸಿಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಪೋಕ್ಸೋ ಕಾಯ್ದೆಯಡಿ ಮುಖ್ಯ ಶಿಕ್ಷಕನ ಬಂಧನ

ಪ್ರಗತಿವಾಹಿನಿ ಸುದ್ದಿ, ಶಿರಸಿ –  ಶಿರಸಿ ತಾಲೂಕಿನ ಸರಕಾರಿ ಪ್ರಾಥಮಿಕ ಶಾಲೆಯೊಂದರ ಮುಖ್ಯ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿನಿಯ ಪಾಲಕರು ಪ್ರಕರಣ ದಾಖಲಿಸಿದ್ದರು.

ಶಿರಸಿ – ಕುಮಟಾ ರಸ್ತೆಯಲ್ಲಿರುವ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದ್ದು, ನಂತರ ಶಿಕ್ಷಕನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ.

ಈ ಹಿನ್ನೆಲೆಯಲ್ಲಿ ಮುಖ್ಯ ಶಿಕ್ಷಣ ಸುರೇಶ ಹೆಗಡೆ (53) ಎನ್ನುವ ಶಿಕ್ಷಕನನ್ನು ಬಂಧಿಸಲಾಗಿದೆ.

Home add -Advt

ವಿದ್ಯಾರ್ಥಿನಿಗೆ ಹಲವಾರು ದಿನಗಳಿಂದ ಕಿರುಕುಳ ನೀಡುತ್ತಿದ್ದ ಎನ್ನುವ ಆರೋಪವಿದೆ.

ಡಿಎಸ್ಪಿ ರವಿ ನಾಯಕ ಹಾಗೂ ಸಿಪಿಐ ರಾಮಚಂದ್ರ ನಾಯಕ ಮಾರ್ಗದರ್ಶನದಲ್ಲಿ ಪಿಎಸ್ಐ ಈರಯ್ಯ  ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮತ್ತೆ ಏರಿಕೆ ಕಂಡ ಚಿನ್ನ, ಬೆಳ್ಳಿ ದರ: 10 ದಿನದಲ್ಲೇ ಅಧಿಕ ದರ

Related Articles

Back to top button