ಪ್ರಗತಿವಾಹಿನಿ ಸುದ್ದಿ; ಮುಂಬೈ: ಐಐಟಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಾನ್ಸ್ ಟೇಬಲ್ ಓರ್ವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಮುಂಬೈನ ಸಂಪದ ಪಾಮ್ ಬೀಚ್ ನಲ್ಲಿ ಈ ಘಟನೆ ನಡೆದಿದೆ. 19 ವರ್ಷದ ಐಐಟಿ ವಿದ್ಯಾರ್ಥಿನಿಯ ಮೈಕೈ ಮುಟ್ಟಿ ಕಾನ್ಸ್ ಟೇಬಲ್ ದೀಪಕ್ ರಾಥೋಡ್ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಕುಡಿದ ಮತ್ತಿನಲ್ಲಿದ್ದ 30 ವರ್ಷದ ಪೊಲೀಸ್ ಕಾನ್ಸ್ ಟೇಬಲ್, ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿ, ಬೈಕ್ ನಲ್ಲಿ ಕೂರುವಂತೆ ಒತ್ತಾಯಿಸಿದ್ದಾನೆ. ಈ ಬಗ್ಗೆ ಸಂತ್ರಸ್ತ ಯುವತಿ ಪೊವೈ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕಾನ್ಸ್ ಟೇಬಲ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಸಧ್ಯ ಪೊಲೀಸ್ ಕಾನ್ಸ್ ಟೇಬಲ್ ನನ್ನು ಅಮಾನತುಗೊಳಿಸಿ ನವಿ ಮುಂಬೈ ಪೊಲೀಸ್ ಆಯುಕ್ತ ಮಿಲಿಂದ್ ಭರಾಂಬೆ ಘಟನೆ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.
*ಮೀಸಲಾತಿ ಗೊಂದಲಕ್ಕೆ ಸಿಎಂ ಸ್ಪಷ್ಟನೆ *
https://pragati.taskdun.com/panchamasaliokkaligareservationcm-basavaraj-bommaireactionhubli/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ