ಪ್ರಗತಿವಾಹಿನಿ ಸುದ್ದಿ; ಹಾಸನ: ವಸತಿ ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಾಂಶುಪಾಲರನ್ನು ಬಂಧಿಸಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡಿನಲ್ಲಿ ನಡೆದಿದೆ.
ಶಿವಕುಮಾರ್ ಬಂಧಿತ ಆರೋಪಿ ಪ್ರಾಂಶುಪಾಲ. ಆರೋಪಿ ಶಿವಕುಮಾರ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಕಿರುಕುಳಕ್ಕೆ ನೊಂದ ಅಪ್ರಾಪ್ತರು ಪ್ರಾಂಶುಪಾಲರ ವಿರುದ್ಧ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದರು. ದೂರಿನ ಅನ್ವಯ ಸಮಿತಿ ಸದಸ್ಯರು ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ್ದರು.
ಬಳಿಕ ಅರಕಲಗೂಡು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಿನ್ಸಿಪಾಲ್ ಶಿವಕುಮಾರ್ ವಿರುದ್ಧ ಪೋಕ್ಸೋ ಪ್ರಕರಣದಡಿ ಕೇಸ್ ದಾಖಲಿಕೊಂಡ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.
https://pragati.taskdun.com/panchamasali2a-reservationbasava-jayamrutyunjaya-swamijibelagavi-2/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ