Latest

ಪ್ರೌಢ ಶಾಲಾ ಶಿಕ್ಷಕನಿಂದಲೇ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಪ್ರೌಢ ಶಾಲಾ ಶಿಕ್ಷಕನನ್ನು ಕೆ.ಆರ್.ಪೇಟೆ ಪೊಲೀಸರು ಬಂಧಿಸಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಬಂಧಿತ ಶಿಕ್ಷಕನನ್ನು ಹರಿಹರಪುರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕ ಬಿ.ಟಿ.ಕೃಷ್ಣೇಗೌಡ ಎಂದು ಗುರುತಿಸಲಾಗಿದೆ.

ಶಿಕ್ಷಕ ವಿದ್ಯಾರ್ಥಿನಿಯರನ್ನು ಅಸಭ್ಯ ದೃಷ್ಟಿಯಿಂದ ನೋಡುತ್ತಾ, ಮೈಕೈ ಮುಟ್ಟಿ ಕಿರುಕುಳ ನೀಡುತ್ತಿದ್ದ. ಇದರಿಂದ ನೊಂದ ವಿದ್ಯಾರ್ಥಿನಿಯರು ಪೋಷಕರಿಗೆ ಮಾಹಿತಿ ನೀಡಿದ್ದು, ಪೋಷಕರು ಶಿಕ್ಷಕನಿಗೆ ಎಚ್ಚರಿಕೆ ನೀಡಿ ಸುಮ್ಮನಾಗಿದ್ದಾರೆ.

ವಿಷಯ ತಿಳಿದ ಬಿಇಒ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಕಿರುಕುಳ ನೀಡಿರುವುದು ಖಚಿತ ಪಡಿಸಿಕೊಂಡ ಬಿಇಒ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಶಿಕ್ಷಕನನ್ನು ಬಂಧಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button