Karnataka NewsUncategorized

*ಬೆಳಗಾವಿ: ಬೈಕ್ ರ‍್ಯಾಲಿ ಮೂಲಕ ಮತದಾನದ ಜಾಗೃತಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮೇ 10 ರಂದು ನಡೆಯುವ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಎಸ್. ಜಿ. ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸ್ವಯಂ ಸೇವಾ ವಿಭಾಗವು ರೋಟರ್ಯಾಕ್ಟ್ ಕ್ಲಬ್ ಮತ್ತು ಮಹಾನಗರ ಪಾಲಿಕೆ, ಬೆಳಗಾವಿಯ ಸಂಯುಕ್ತಆಶ್ರಯದಲ್ಲಿ ಮಹಾವಿದ್ಯಾಲಯದ ಆವರಣದಿಂದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವರೆಗೆ ದಿನಾಂಕ 07/05/2023 ರಂದು ಬೈಕ್ ರ‍್ಯಾಲಿ ಮೂಲಕ ಬೆಳಗಾವಿ ನಗರದ ತುಂಬೆಲ್ಲಾ ಸಂಚರಿಸಿ ಮತದಾನದ ಜಾಗೃತಿ ಮೂಡಿಸಿದರು.

ಈ ಐತಿಹಾಸಿಕ ಮತ್ತು ಅಪರೂಪದ ಸಾಮಾಜಿಕ ಕಳಕಳಿಯ ಕಾರ್ಯಕ್ರಮಕ್ಕೆ ನಾಗನೂರು ರುದ್ರಾಕ್ಷಿಮಠ, ಬೆಳಗಾವಿಯ ಪೂಜ್ಯ ಶ್ರೀ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಹಸಿರು ನಿಶಾನೆ ತೋರಿಸುವ ಮೂಲಕ ಬೈಕ್ ರ‍್ಯಾಲಿಗೆ ಚಾಲನೆ ನೀಡಿದರು.

ಈ ಬೈಕ್ ರ‍್ಯಾಲಿಯಲ್ಲಿ ಬೆಳಗಾವಿಯ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ. ರುದ್ರೇಶ ಘಾಳಿ, ಉಪ ಆಯುಕ್ತರಾದ ಶ್ರೀಮತಿ ಭಾಗ್ಯಶ್ರೀ ಹುಗ್ಗಿ, ಎಸ್. ಜಿ. ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಬಿ. ಆರ್. ಪಟಗುಂದಿ, ರಾಷ್ಟ್ರೀಯ ಸ್ವಯಂ ಸೇವಾ ವಿಭಾಗದ ಕಾರ್ಯಕ್ರಮ ಸಂಯೋಜನಾಧಿಕಾರಿಯಾದ ಪ್ರೊ. ಮಂಜುನಾಥ ಶರಣಪ್ಪನವರ, ಮಹಾವಿದ್ಯಾಲಯದ ಎಲ್ಲ ವಿಭಾಗ ಮುಖ್ಯಸ್ಥರು ಸ್ವತಃ ಬೈಕ್ ಚಾಲನೆ ಮೂಡುವ ಮೂಲಕ ಎಲ್ಲ ವಿದ್ಯಾರ್ಥಿಗಳೊಂದಿಗೆ ಬೈಕ್ ರ‍್ಯಾಲಿಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಘನತೆಯನ್ನು ಹೆಚ್ಚಿಸಿ ಸಮಾಜಕ್ಕೆ ಹಾಗೂ ವಿದ್ಯಾರ್ಥಿಗಳಿಗೆ ಮಾದರಿಯಾಗುವುದಲ್ಲದೆ ಈ ವಿಶೇಷ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ರಾಷ್ಟ್ರೀಯ ಸ್ವಯಂ ಸೇವಾ ವಿಭಾಗದ ಕಾರ್ಯಕ್ರಮ ಸಂಯೋಜನಾಧಿಕಾರಿಯಾದ ಪ್ರೊ. ಮಂಜುನಾಥ ಶರಣಪ್ಪನವರ ಈ ಕಾರ್ಯಕ್ರಮವನ್ನು ಆಯೋಜಿಸಿದರು. ಮಹಾವಿದ್ಯಾಲಯದ ಎಲ್ಲ ವಿದ್ಯಾರ್ಥಿಗಳು, ಮಹಾನಗರ ಪಾಲಿಕೆಯ ಸಿಬ್ಬಂದಿಗಳು ಅತ್ಯಂತ ಉತ್ಸಾಹದಿಂದ ಈ ಬೈಕ್ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದರು.

https://pragati.taskdun.com/pm-narendra-modinanjanaguducongress/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button