
ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಎಸ್ ಡಿಪಿಐ ಅಧ್ಯಕ್ಷ ಸಿದ್ದಿಕ್ ಉಳ್ಳಾಲ್ ನ್ನು ಬಂಧಿಸಲಾಗಿದೆ.
ನೆರವು ನೀಡುವ ನೆಪದಲ್ಲಿ ಮನೆಗೆ ಬಂದಿದ್ದ ಸಿದ್ದಿಕ್ ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡುತ್ತಿದ್ದ. ಈ ಕುರಿತು ಸಂತ್ರಸ್ತ ಮಕ್ಕಳ ತಾಯಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಸಿದ್ದಿಕ್ ನನ್ನು ಬಂಧಿಸಿದ್ದು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಪ್ರೀತಿಸಿ ವಿವಾಹವಾಗಿದ್ದ ಮಹಿಳೆಗೆ ಇಬ್ಬರು ಹೆಣ್ಣುಮಕ್ಕಳನ್ನು ನೀಡಿದ್ದ ಪತಿ ಮಹಾಶಯ ಆಕೆಗೆ ಕೈಕೊಟ್ಟು ಪರಾರಿಯಾಗಿದ್ದ. ಕಷ್ಟಪಟ್ಟು ಜೀವನ ನಡೆಸುತ್ತಿದ್ದ ಮಹಿಳೆ ಹಾಗೂ ಆಕೆಯ ಮಕ್ಕಳಿಗೆ ಸಹಾಯ ಮಾಡುವ ನೆಪದಲ್ಲಿ ಮನೆಗೆ ಬಂದಿದ್ದ ಎಸ್ ಡಿಪಿ ಐ ವಲಯ ಸಮಿತಿ ಅಧ್ಯಕ್ಷ ಸಿದ್ದಿಕ್ ಮಹಿಳೆಯ ಇಬ್ಬರು ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಸಂಬಂಧ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಳು ಎಂದು ತಿಳಿದುಬಂದಿದೆ.