

ಪ್ರಗತಿವಾಹಿನಿ ಸುದ್ದಿ: ಹಿರೇಬಾಗೇವಾಡಿ: ಹಿರೇಬಾಗೇವಾಡಿ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಶಾದಿ ಮಹಲ್ (ಕಮ್ಯುನಿಟಿ ಹಾಲ್) ಕಟ್ಟಡಕ್ಕೆ ಕಾಂಕ್ರೀಟ್ (ಸ್ಲ್ಯಾಬ್) ಹಾಕುವ ಕಾಮಗಾರಿಗೆ ಸ್ಥಳೀಯ ಜನ ಪ್ರತಿನಿಧಿಗಳು, ಮುಖಂಡರು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಸೇರಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದಾಗಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಶಾದಿ ಮಹಲ್ ನಿರ್ಮಾಣಗೊಳ್ಳಲಿದೆ. ನಿಗದಿತ ಸಮಯದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡುವಂತೆ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದು ಮೃಣಾಲ ಹೆಬ್ಬಾಳಕರ್ ತಿಳಿಸಿದರು.
ಈ ವೇಳೆ ದರ್ಗಾ ಅಜ್ಜನವರಾದ ಅಶ್ರಫ್ ಪೀರ್ ಖಾದ್ರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿ.ಸಿ.ಪಾಟೀಲ, ಸುರೇಶ ಇಟಗಿ, ನಿಂಗಪ್ಪ ತಳವಾರ, ಗ್ರಾಮದ ಅನೇಕ ಮುಖಂಡರು, ನಾಗರಿಕರು ಉಪಸ್ಥಿತರಿದ್ದರು.