ಪ್ರಗತಿವಾಹಿನಿ ಸುದ್ದಿ; ಮುಂಬೈ: ಪುತ್ರ ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದ ಬೆನ್ನಲ್ಲೇ ಇದೀಗ ಬಾಲಿವುಡ್ ನಟ ಶಾರುಖ್ ಖಾನ್ ಗೂ ಸಂಕಷ್ಟ ಎದುರಾಗಿದೆ ಎನ್ನಲಾಗುತ್ತಿದೆ. ಶಾರುಖ್ ಖಾನ್ ನಿವಾಸದ ಮೇಲೆ ಎನ್ ಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮುಂಬೈನ ಬಾಂದ್ರಾದಲ್ಲಿರುವ ಶಾರುಖ್ ಖಾನ್ ಅವರ ‘ಮನ್ನತ್’ ನಿವಾಸದ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಇನ್ನೊಂದೆಡೆ ನಟಿ ಅನನ್ಯಾ ಪಾಂಡೆ ಮನೆ ಮೇಲೂ ಎನ್ ಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಹೈಪ್ರೊಪೈಲ್ ಡ್ರಗ್ಸ್ ಪ್ರಕರಣದ ಬೆನ್ನಲ್ಲೇ ಎನ್ ಸಿಬಿ ಅಧಿಕಾರಿಗಳು ಬಾಲಿವುಡ್ ನಟ, ನಟಿಯರ ನಿವಾಸದ ಮೇಲೆ ದಾಳಿ ಮುಂದುವರೆಸಿದ್ದಾರೆ.
ಮಹಿಳೆಯರ ಆತ್ಮರಕ್ಷಣೆಗಾಗಿ ವಿಶೇಷ ತರಬೇತಿ: ಸಿಎಂ ಬೊಮ್ಮಾಯಿ ಭರವಸೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ