LatestUncategorized

*ರಾಜ್ಯಾದ್ಯಂತ ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ರಾಜ್ಯಾದ್ಯಂತ ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.

ವಿಧಾನಸೌಧದ ಪೂರ್ವದ್ವಾರ ಗ್ರ್ಯಾಂಡ್ ಸ್ಟೆಪ್ ಮುಂಭಾಗದ ವೇದಿಕೆಯಲ್ಲಿ ಕಾರ್ಯಕ್ರಮಕ್ಕೆ ದೀಪ ಬೆಳಗುವ ಮೂಲಕ ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು.

ಇದೇ ವೇಳೆಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶಕ್ತಿ ಯೋಜನೆಯ ಲಾಂಚನವನ್ನು ಬಿಡುಗಡೆ ಮಾಡಿದರು. ಈ ವೇಳೆ 5 ಮಹಿಳೆಯರಿಗೆ ಸ್ಮಾರ್ಟ್ ಕಾರ್ಡ್ ಮಾದರಿಯನ್ನು ವಿತರಿಸಲಾಯಿತು.

Home add -Advt

ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್,ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಚಿವರಾದ ಕೆ.ಜೆ.ಜಾರ್ಜ್, ಮಧು ಬಂಗಾರಪ್ಪ, ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಮೊದಲಾದವರು ಉಪಸ್ಥಿತರಿದ್ದರು.

Related Articles

Back to top button