LatestUncategorized

*ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಟಿಕೆಟ್ ವಿತರಿಸಿದ ಸಿಎಂ-ಡಿಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಹಿಳೆಯರ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆಗೆ ವಿಧಾನಸೌಧದಲ್ಲಿ ಅಧಿಕೃತವಾಗಿ ಚಾಲನೆ ನೀಡಿದ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿಧಾನಸೌಧದಿಂದ ಬಿಎಂಟಿಸಿ ಬಸ್ ನಲ್ಲಿ ಮೆಜೆಸ್ಟಿಕ್ ಗೆ ಆಗಮಿಸಿ ಮಹಿಳೆಯರಿಗೆ ಶೂನ್ಯ ದರದ ಟಿಕೆಟ್ ನೀಡುವ ಮೂಲಕ ಮತ್ತೊಮ್ಮೆ ಯೋಜನೆಗೆ ಚಾಲನೆ ನೀಡಿದರು.

Related Articles

ಬಸ್ ನಲ್ಲಿ ಮೆಜೆಸ್ಟಿಕ್ ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಹಲವು ಬಿಎಂಟಿಸಿ ಬಸ್ ಮಹಿಳಾ ಪ್ರಯಾಣಿಕರಿಗೆ, ಕೆ.ಎಸ್.ಆರ್.ಟಿಸಿ ಬಸ್ ಮಹಿಳಾ ಪ್ರಯಾಣಿಕರಿಗೆ ಶೂನ್ಯದರದ ಟಿಕೆಟ್ ನೀಡಿದರು.

ಈ ವೇಳೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆ ಎಸ್ ಆರ್ ಟಿಸಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಟಿಕೆಟ್ ವಿತರಿಸಿದ್ದು ವಿಶೇಶವಾಗಿತ್ತು. ಉಚಿತ ಟಿಕೆಟ್ ಪಡೆದ ಮಹಿಳೆಯರ ಸಂಭ್ರಮ, ಹರ್ಷೋದ್ಘಾರ ಮುಗಿಲುಮುಟ್ಟಿದೆ.

ಫ್ರೀ ಪ್ರಯಾಣದ ಟಿಕೆಟ್ ಪಡೆದ ಮಹಿಳೆಯರಿಗೆ ಬಸ್ ನಲ್ಲಿ ಹೂವು ಹಾಗೂ ಸಿಹಿ ತಿಂಡಿ ನೀಡಿ ಆಹ್ವಾನ ನೀಡಲಾಯಿತು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button