Cancer Hospital 2
Beereshwara 36
LaxmiTai 5

*ಶಕ್ತಿ ಯೋಜನೆ: ವಾಯವ್ಯ ಸಾರಿಗೆ ಸಂಸ್ಥೆಯಲ್ಲಿ 3 ಕೋಟಿ ದಾಟಿದ ಮಹಿಳಾ ಪ್ರಯಾಣಿಕರ ಸಂಖ್ಯೆ*

Anvekar 3

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ರಾಜ್ಯ ಸರ್ಕಾರ ಜಾರಿಗೊಸಿರುವ “ಶಕ್ತಿ” ಯೋಜನೆಯಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಜುಲೈ 4 ರವರೆಗ ಒಟ್ಟು 3.15 ಕೋಟಿ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದು, ಪ್ರಯಾಣದ ಟಿಕೆಟ್ ಮೌಲ್ಯ ರೂ. 80.96 ಕೋಟಿಗಳಾಗಿದೆ. ಸಾರ್ವಜನಿಕರ ಸಹಭಾಗಿತ್ವ ಹಾಗೂ ಸಿಬ್ಬಂದಿ ಕಾರ್ಯಕ್ಷಮತೆಯಿಂದ ಯೋಜನೆ ಯಶಸ್ವಿಯಾಗಿ ಮುಂದುವರೆದಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ತಿಳಿಸಿದ್ದಾರೆ.

Emergency Service


ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದಿಂದ ಆರಂಭಿಸಲಾಗಿರುವ ಕರ್ನಾಟಕದ ಮಹಿಳೆಯರಿಗೆ ಸರ್ಕಾರಿ ಬಸ್ಸಿನಲ್ಲಿ ರಾಜ್ಯದೊಳಗೆ ಉಚಿತ ಪ್ರಯಾಣದ “ಶಕ್ತಿ” ಯೋಜನೆಗೆ ನಿರೀಕ್ಷೆಗೂ ಮೀರಿ ಭಾರಿ ಸ್ಪಂದನೆ ವ್ಯಕ್ತವಾಗಿದೆ. ಯೋಜನೆ ಜಾರಿಯಾಗಿ 24 ದಿನ‌ ಕಳೆದರೂ ಮಹಿಳೆಯರ ಉತ್ಸಾಹ ತಗ್ಗಿಲ್ಲ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಆರು ಜಿಲ್ಲೆಗಳ 9 ಸಾರಿಗೆ ವಿಭಾಗಗಳ ಬಸ್ಸುಗಳಲ್ಲಿ ಜುಲೈ 4 ರಂದು 15,63,881 ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ಪ್ರಯಾಣದ ಟಿಕೆಟ್ ಮೌಲ್ಯ ರೂ. 3,89,09,187 ಗಳಾಗಿದೆ. ಯೋಜನೆ ಜಾರಿಯಾದ ದಿನ ಜೂನ್ 11ರಿಂದ ಜುಲೈ 4 ರವರೆಗೆ ಒಟ್ಟು 3,15,08,654 ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ಪ್ರಯಾಣದ ಟಿಕೆಟ್ ಮೌಲ್ಯ ರೂ. 80,96,51,876 ಗಳಾಗಿದೆ.

ಸಾರ್ವಜನಿಕರ ಸಹಭಾಗಿತ್ವ ಹಾಗೂ ಸಹಕಾರದಿಂದ”ಶಕ್ತಿ” ಯೋಜನೆ ಯಶಸ್ವಿಯಾಗಿ ಮುಂದುವರೆದಿದೆ. ಸಂಸ್ಥೆಯಲ್ಲಿ ಲಭ್ಯವಿರುವ ಬಸ್ಸುಗಳು ಹಾಗೂ ಮಾನವ ಸಂಪನ್ಮೂಲಗಳ ಸದ್ಬಳಕೆ ಮಾಡುವ ಮೂಲಕ ಅತ್ಯಲ್ಪ ಕಾಲದಲ್ಲಿ ಯೋಜನೆಯ ಸುಗಮ ಅನುಷ್ಟಾನ ಹಾಗೂ ಯಶಸ್ವಿಯಾಗಿ ಮುಂದುವರೆಯಲು ನೌಕರರು ಮತ್ತು ಅಧಿಕಾರಿಗಳ ಕಾರ್ಯ ಕ್ಷಮತೆ ಶ್ಲಾಘನೀಯ ಎಂದು ವಾಕರಸಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ಅಭಿನಂದಿಸಿದ್ದಾರೆ.

Bottom Add3
Bottom Ad 2