*ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಬಸ್ ಗಳು ರಶ್; ಸಿಟ್ಟಿಗೆದ್ದ ವಿದ್ಯಾರ್ಥಿಗಳಿಂದ ಬಸ್ ಮೇಲೆ ಕಲ್ಲು ತೂರಾಟ*

ಪ್ರಗತಿವಾಹಿನಿ ಸುದ್ದಿ; ಯಾದಗಿರಿ: ಶಕ್ತಿ ಯೋಜನೆಯಡಿ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಹಿನ್ನೆಲೆಯಲ್ಲಿ ಸರಕಾರಿ ಬಸ್ ಗಳಲ್ಲಿ ಕಾಲಿಡಲೂ ಜಾಗವಿಲ್ಲದಷ್ಟು ಮಹಿಳೆಯರೇ ತುಂಬಿತುಳುಕುತ್ತಿದ್ದಾರೆ. ಶಾಲಾ-ಕಾಲೇಜುಗಳಿಗೆ ತೆರಳು ವಿದ್ಯಾರ್ಥಿಗಳಿಗೆ ಬಸ್ ಸಿಗದ ಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಬೇಸತ್ತ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಸ್ ನಿಲ್ಲಿಸದೇ ಹೋಗಿದ್ದಕ್ಕೆ ರೊಚ್ಚಿಗೆದ್ದ ವಿದ್ಯಾರ್ಥಿಗಳು ಬಸ್ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಯಾದಗಿರಿ ತಾಲೂಕಿನ ಅಲ್ಲಿಪುರ ಗ್ರಾಮದಲ್ಲಿ ನಡೆದಿದೆ. ಶಾಲಾ-ಕಾಲೇಜಿಗೆ ತೆರಳಲು ಬಸ್ ಗಾಗಿ ಕಾದು ಕುಳಿತಿದ್ದ ವಿದ್ಯಾರ್ಥಿಗಳಿಗೆ ಕಲಬುರ್ಗಿ ಕಡೆಯಿಂದ … Continue reading *ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಬಸ್ ಗಳು ರಶ್; ಸಿಟ್ಟಿಗೆದ್ದ ವಿದ್ಯಾರ್ಥಿಗಳಿಂದ ಬಸ್ ಮೇಲೆ ಕಲ್ಲು ತೂರಾಟ*