ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಹಿಳೆಯರಿಗೆ ಸರ್ಕಾರಿ ಬಸ್ ನಲ್ಲಿ ಉಚಿತ ಪ್ರಯಾಣ ಶಕ್ತಿ ಯೋಜನೆಗೆ ವಿಶಿಷ್ಠವಾಗಿ ಚಾಲನೆ ನೀಡಲು ಸಿಎಂ ಸಿದ್ದರಾಮಯ್ಯ ಪ್ಲಾನ್ ಮಾಡಿದ್ದು, ಭಾನುವಾರ ಜೂನ್ 11ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಡಕ್ಟರ್ ಆಗಲಿದ್ದಾರೆ.
ಭಾನುವಾರ ವಿಧಾನಸೌಧದಲ್ಲಿ ಶಕ್ತಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಚಾಲನೆ ನೀಡಲಿದ್ದಾರೆ. ಇದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಸರ್ಕಾರಿ ಬಸ್ ನಲ್ಲಿ ಕಂಡಕ್ಟರ್ ಆಗಿ ಮಹಿಳೆಯರಿಗೆ ಖುದ್ದಾಗಿ ಉಚಿತ ಟಿಕೆಟ್ ನೀಡಲಿದ್ದಾರೆ. ಮೆಜೆಸ್ಟಿಕ್ ನಿಂದ ವಿಧಾನಸೌಧಕ್ಕೆ ಸಿಎಂ ಸಿದ್ದರಾಮಯ್ಯ ಬಸ್ ನಲ್ಲಿ ಪ್ರಯಾಣಿಸಲಿದ್ದಾರೆ ಎಂದು ತಿಳಿದುಬಂದಿದೆ.
ಕರ್ನಾಟಕದ ಮಹಿಳೆಯರಿಗೆ ಸರ್ಕಾರಿ ಬಸ್ ನಲ್ಲಿ ಉಚಿತ ಪ್ರಯಾಣ ಯೋಜನೆ ಇದಾಗಿದ್ದು, ಈ ಯೋಜನೆ ಅನುಕೂಲ ಪಡೆಯುವ ಮಹಿಳೆಯರು ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆದುಕೊಳ್ಳಬೇಕು.
https://pragati.taskdun.com/karnatakaheavy-raincyclone-effect/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ