Cancer Hospital 2
Laxmi Tai Society2
Beereshwara add32

*ನಾರಿ ಶಕ್ತಿ ರಾಷ್ಟ್ರದ ಶಕ್ತಿ: ಶಶಿಕಲಾ ಜೊಲ್ಲೆ ಅಭಿಮತ*

Anvekar 3

ಪ್ರಗತಿವಾಹಿನಿ ಸುದ್ದಿ: ಯಕ್ಸಂಬಾ ಪಟ್ಟಣದ ಬೀರೇಶ್ವರ ಭವನದಲ್ಲಿ ಸೋಮವಾರ ನಡೆದ ಭಾರತೀಯ ಜನತಾ ಪಕ್ಷ ಚಿಕ್ಕೋಡಿ ಜಿಲ್ಲೆ ವತಿಯಿಂದ ಹಮ್ಮಿಕೊಂಡಿದ್ದ “ಶಕ್ತಿ ವಂದನ್” ಕಾರ್ಯಾಗಾರ ಸಭೆಯನ್ನು ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಶಾಸಕರಾದ ಶಶಿಕಲಾ ಜೊಲ್ಲೆ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಜಿ ಅವರ ನೇತೃತ್ವದಲ್ಲಿ ‘ನಾರಿ ಶಕ್ತಿ ವಂದನ ಮೂಲಕ‌ ಪ್ರತಿ ರಾಜ್ಯದಲ್ಲಿನ ಸ್ವ-ಸಹಾಯ ಸಂಘಗಳಿಗೆ ನಗರ ಮತ್ತು ಗ್ರಾಮೀಣ ಭಾಗದ ಸ್ತ್ರೀಯರಿಗೆ ( ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ವ್ಯಾಪ್ತಿಯ) ಕೇಂದ್ರದ ಹಲವಾರು ಯೋಜನೆಗಳನ್ನು ತಲುಪಿಸುವುದು ಹಾಗೂ ತಿಳುವಳಿಕೆ ಹೇಳುವ ಕಾರ್ಯಕ್ರಮವಾಗಿದೆ. ಮೋದಿ ಅವರ ಹಲವಾರು ಯೋಜನೆಗಳು ಸ್ವ-ಉದ್ಯೋಗ ಕೈಗೊಳ್ಳಲು ಸಹಕಾರಿಯಾಗಲಿದೆ. ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಮೋದಿ ಅವರು ಮಹಿಳೆಯರ ಸಬಲೀಕರಣಕ್ಕಾಗಿ ತಂದಿರುವ ಯೋಜನೆಗಳನ್ನು ಗ್ರಾಮದ ಪ್ರತಿಯೊಂದು ಸ್ತ್ರೀಯರಿಗೆ ಮುಟ್ಟಿಸುವ ಕಾರ್ಯ ಮಾಡಬೇಕು ಎಂದು ಶಶಿಕಲಾ ಜೊಲ್ಲೆ ಕರೆ ನೀಡಿದರು.

Emergency Service

ಬಳಿಕ ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ನರೇಂದ್ರ ಮೋದಿಯವರು ಕಳೆದ 9.8 ವರ್ಷದಲ್ಲಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಅದನ್ನು ಮುಟ್ಟಿಸುವ ಕಾರ್ಯವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕು ಎಂದರು.

ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೊಳ ಹಾಗೂ ನಿಂಗಪ್ಪ ಕೋಕಲೆ ಮಾತನಾಡಿದರು.

ಜಿಲ್ಲಾಧ್ಯಕ್ಷರಾದ ಸತೀಶ ಅಪ್ಪಾಜಿಗೋಳ,ಜಿಲ್ಲಾ ಸಂಚಾಲಕರಾದ ನಿಂಗಪ್ಪಣಾ ಕೋಕಲೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಅಮೃತ ಕುಲಕರ್ಣಿ, ಮಂಡಲ ಅಧ್ಯಕ್ಷರಾದ ಸಂಜಯ ಪಾಟೀಲ, ಪಕ್ಷದ ಪದಾಧಿಕಾರಿಗಳು ಮಹಿಳೆಯರು ಉಪಸ್ಥಿತರಿದ್ದರು.

Gokak Jyotishi add 8-2
Bottom Add3
Bottom Ad 2

You cannot copy content of this page