Kannada NewsKarnataka NewsLatest

*ಶಕ್ತಿ ಯೋಜನೆ ದುರುಪಯೋಗ: ನಾಲ್ವರು ಕಂಡಕ್ಟರ್ಸ್ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ಸರ್ಕಾರ ಮಹಿಳೆಯರ ಅನುಕೂಲಕ್ಕಾಗಿ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ ಜಾರಿಗೆ ತಂದಿದ್ದರೆ ಕೆಲ ಸರ್ಕಾರಿ ಬಸ್ ಕಂಡಕ್ಟರ್ ಗಳು ಶಕ್ತಿ ಯೋಜನೆಯನ್ನು ದುರುಪಯೋಗಪಡಿಸಿಕೊಂಡು ಹಣ ಲಪಟಾಯಿಸಿರುವ ಘಟನೆ ಬೆಳಕಿಗೆ ಬಂದಿದೆ.

ಬಿಎಂಟಿಸಿಯ ಕೆಲ ನಿರ್ವಾಹಕರು ಶಕ್ತಿ ಯೋಜನೆಯನ್ನು ದುರುಪಯೋಗಪಡಿಸಿಕೊಂಡು ಪುರುಷ ಪ್ರಯಾಣಿಕರಿಂದ ಅದರಲ್ಲಿಯೂ ಕನ್ನಡ ಬಾರದ ಪುರುಷ ಪ್ರಯಾಣಿಕರಿಂದಮಹಿಳೆಯರ ಉಚಿತ ಟಿಕೆಟ್ ನೀಡಿ ತಮ್ಮ ವೈಯಕ್ತಿಕ ಯುಪಿಐ ಕ್ಯೂಆರ್ ಕೋಡ್‌ಗಳನ್ನು ಬಳಸಿ ನಿಗಮಕ್ಕೆ ಬರಬೇಕಿದ್ದ ಹಣವನ್ನು ತಮ್ಮ ಖಾತೆಗೆ ಹಾಕಿಸಿಕೊಂಡಿದ್ದಾರೆ. ಇದರಲ್ಲಿ ಪ್ರಮುಖವಾಗಿ ಭಾಗಿಯಾಗಿದ್ದ ಬಿಎಂಟಿಸಿಯ ನಾಲ್ವರು ನಿರ್ವಾಹಕರನ್ನು ಇದೀಗ ಅಮಾನತುಗೊಳಿಸಲಾಗಿದೆ.

Related Articles
Home add -Advt

ಶಕ್ತಿ ಯೋಜನೆಯನ್ನು ದುರುಪಯೋಗಮಾಡಿ ಕೆಲ ನಿರ್ವಾಹಕರು ಲಕ್ಷ ಲಕ್ಷ ಹಣ ತಮ್ಮ ಖಾತೆಗೆ ಹಾಕಿಸಿಕೊಂಡಿದ್ದಾರೆ. ಶಕ್ತಿ ಯೋಜನೆಯ ಫ್ರೀ ಟಿಕೆಟ್ ಮೇಲೆ ಕನ್ನಡದಲ್ಲಿ ಮಾತ್ರ ಉಚಿತ ಪ್ರಯಾಣ ಎಂದು ಪ್ರಿಂಟ್ ಮಾಡಲಾಗಿದೆ. ಹೀಗಾಗಿ ಕನ್ನಡ ಓದಲು ಬಾರದ ಪ್ರಯಾಣಿಕರನ್ನೇ ಟಾರ್ಗೆಟ್​ ಮಾಡಿ ಅವರಿಗೆ ಟಿಕೆಟ್​​ ನೀಡಿ ಹಣ ಪಡೆಯಲಾಗುತ್ತಿತ್ತು. ತನಿಖೆಯಲ್ಲಿ ಕೆಲ ನಿರ್ವಾಹಕರ ಕಳ್ಳಾಟ ಬಯಲಾಗಿದೆ.
ಸೂರ್ಯನಾರಾಯಣ- ಡಿಪೋ- 18, ಡ್ರೈವರ್ ಕಂ ಕಂಡಕ್ಟರ್ : 54,290 ರೂ.
ಬೊಮ್ಮಲಿಂಗೇಶ್ ಸಿ.- ಡಿಪೋ- 18, ಡ್ರೈವರ್ ಕಂ ಕಂಡಕ್ಟರ್: 16,404 ರೂ.
ಬ್ರಿಜೇಶ್ ಬಾಬು- ಡಿಪೋ- 51, ಡ್ರೈವರ್ ಕಂ ಕಂಡಕ್ಟರ್: 9,795 ರೂ.
ಮೋಹನ್- ಡಿಪೋ- 18, ಡ್ರೈವರ್ ಕಂ ಕಂಡಕ್ಟರ್: 6,117 ರೂ.
ಈ ಹಿನ್ನೆಲೆಯಲ್ಲಿ ನಾಲ್ವರು ಕಂಡಕ್ಟರ್ ಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಗಿದೆ.


Related Articles

Back to top button