
ಪ್ರಗತಿವಾಹಿನಿ ಸುದ್ದಿ; ಕಾರವಾರ: ಈಜಲೆಂದು ಶಾಲ್ಮಲಾ ನದಿಗೆ ಇಳಿದಿದ್ದ ಐವರು ನೀರುಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನಲ್ಲಿ ಭೀಮನಗುಂಡಿಯಲ್ಲಿ ನಡೆದಿದೆ.
ಶಾಲ್ಮಲಾ ನದಿಯಲ್ಲಿ ಈಜಲು ಇಳಿದಿದ್ದ ವೇಳೆ ಓರ್ವ ನೀರುಪಾಲಾಗುತ್ತಿದ್ದ. ಆತನನ್ನು ರಕ್ಷಿಸಲು ಹೋಗಿ ಉಳಿದವರೂ ನೀರುಪಾಲಾಗಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಭೇಟಿ ನೀಡಿದ್ದಾರೆ.
ಪ್ರಸ್ತುತ ಓರ್ವನ ಶವ ಪತ್ತೆಯಾಗಿದ್ದು, ಉಳಿದವರಿಗಾಗಿ ಶೋಧ ಕಾರ್ಯ ನಡೆಸಲಾಗಿದೆ. ಶಿರಸಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ