ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸರಕಾರ ರಚನೆಗೆ ಮುಂದಾಗಿದ್ದು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಮಧ್ಯದ ತೀವ್ರ ಪೈಪೋಟಿ ನಡುವೆ ಲಿಂಗಾಯತರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ಹೊಸ ಡಿಮ್ಯಾಂಡನ್ನು ಶಾಮನೂರು ಶಿವಶಂಕರಪ್ಪ ಇರಿಸಿದ್ದಾರೆ.
ಸಣ್ಣ ಸಮುದಾಯಗಳ 50 ಅಭ್ಯರ್ಥಿಗಳು ರಾಜ್ಯದ ನಾನಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವಲ್ಲಿ ಲಿಂಗಾಯತರು ಪ್ರಮುಖ ಪಾತ್ರ ವಹಿಸಿದ್ದಾರೆ. ಹೀಗಾಗಿ ಲಿಂಗಾಯತ ಸಮುದಾಯದವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು, ಜೊತೆಗೆ ಸಚಿವ ಸಂಪುಟದಲ್ಲಿ ಲಿಂಗಾಯತರಿಗೆ ಹೆಚ್ಚಿನ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿ ಶಾಮನೂರು ಶಿವಶಂಕರಪ್ಪ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ.
ದಶಕಗಳಿಂದ ಲಿಂಗಾಯತ ಸಮುದಾಯ ಹೆಚ್ಚಿನ ಪ್ರಮಾಣದಲ್ಲಿ ಕಾಂಗ್ರೆಸ್ ಗೆ ಬೆಂಬಲ ನೀಡಿದ್ದರಿಂದ 135 ಸೀಟುಗಳನ್ನು ಗೆಲ್ಲಲು ಸಾಧ್ಯವಾಗಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲುವು ಸಾಧಿಸುವಂತಾಗಲು ಲಿಂಗಾಯತರಿಗೆ ಸಚಿವ ಸಂಪುಟದಲ್ಲಿ ಗರಿಷ್ಠ ಪ್ರಾತಿನಿಧ್ಯ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ