
ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಹಿರಿಯ ಶಾಸಕ, ವೀರಶೈವ ಲಿಂಗಾಯಿತ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನಿನ್ನೆ ಸಂಜೆ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಇಂದು ಅವರ ಅಂತ್ಯಕ್ರಿಯೆ ನಡೆಯುತ್ತಿದೆ.
ದಾವಣಗೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ. ನಿನ್ನೆ ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ವಿಧಿವಶರಾಗಿರುವ ಶಾಮನೂರು ಶ್ವಶಂಕರಪ್ಪ ಅವರ ಪಾರ್ಥಿವ ಶರೀರರವನ್ನು ಇಂದು ಬೆಳಿಗ್ಗೆ ಅವರ ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಅವರ ದಾವಣಗೆರೆ ನಿವಾಸಕ್ಕೆ ತರಲಾಯಿತು. ಅಲ್ಲಿ ಅಂತಿಮ ವಿಧಿ-ವಿಧಾನಗಳು, ಧಾರ್ಮಿಕ ಕಾರ್ಯಗಳು ನಡೆದ ಬಳಿಕ ಪಾರ್ಥಿವ ಶರೀರವನ್ನು ಹೈಸ್ಕೂಲು ಮೈದಾನಕ್ಕೆ ಕೊಂಡೊಯ್ಯಲಾಯಿತು. ಅಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಸಾವಿರಾರು ಜನರು, ರಾಜಕೀಯ ಗಣ್ಯರು ಹಿರಿಯ ನಾಯಕನ ಅಂತಿಮ ದರ್ಶನ ಪಡೆದರು.
ಬಳಿಕ ಸಂಜೆ ನಾಲ್ಕು ಗಂಟೆಗೆ ಹೈಸ್ಕೂಲು ಮೈದಾನದಿಂದ ಕಲ್ಲೇಶ್ವರ ರೈಸ್ ಮಿಲ್ ಆವರಣದವರೆಗೆ ಶಾಮನೂರು ಶಿವಶಂಕರಪ್ಪನವರ ಪಾರ್ಥಿವ ಶರ್ರದ ಅಂತಿಮ ಯಾತ್ರೆ ನಡೆಯಿತು. ಅಂತಿಮ ಯಾತ್ರೆಯಲ್ಲಿ ಲಕ್ಷಾಂತರ ಜನರು ಭಾಗಿಯಾದರು. ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ಇರಿಸಲಾಗಿದ್ದ ಶಾಮನೂರು ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ ಸೇರಿದಂತೆ ಹಲವು ನಾಯಕರು ಪಡೆದರು.

