Kannada NewsKarnataka NewsLatest

*ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಹಿರಿಯ ಶಾಸಕ, ವೀರಶೈವ ಲಿಂಗಾಯಿತ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ, ವೀರಶೈವ-ಲಿಂಗಾಯಿತ ಸಂಪ್ರದಾಯದಂತೆ ನೆರವೇರಿತು.

ನಿನ್ನೆ ಸಂಜೆ ಬೆಂಗಳೂರಿನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದ ಶಾಮನೂರು ಶಿವಶಂಕರಪ್ಪ(94) ಅವರ ಅಂತ್ಯಕ್ರಿಯೆ ದಾವಣಗೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ನೆರವೇರಿತು.

ಇಂದು ಬೆಳಿಗ್ಗೆ ಅವರ ಪಾರ್ಥಿವ ಶರೀರರವನ್ನು ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಅವರ ದಾವಣಗೆರೆ ನಿವಾಸಕ್ಕೆ ತರಲಾಯಿತು. ಅಲ್ಲಿ ಅಂತಿಮ ವಿಧಿ-ವಿಧಾನಗಳು, ಧಾರ್ಮಿಕ ಕಾರ್ಯಗಳು ನಡೆದ ಬಳಿಕ ಪಾರ್ಥಿವ ಶರೀರವನ್ನು ಹೈಸ್ಕೂಲು ಮೈದಾನಕ್ಕೆ ಕೊಂಡೊಯ್ಯಲಾಯಿತು. ಅಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಸಾವಿರಾರು ಜನರು, ರಾಜಕೀಯ ಗಣ್ಯರು ಹಿರಿಯ ನಾಯಕನ ಅಂತಿಮ ದರ್ಶನ ಪಡೆದರು.

ಬಳಿಕ ಸಂಜೆ ನಾಲ್ಕು ಗಂಟೆಗೆ ಹೈಸ್ಕೂಲು ಮೈದಾನದಿಂದ ಕಲ್ಲೇಶ್ವರ ರೈಸ್ ಮಿಲ್ ಆವರಣದವರೆಗೆ ಶಾಮನೂರು ಶಿವಶಂಕರಪ್ಪನವರ ಪಾರ್ಥಿವ ಶರ್ರದ ಅಂತಿಮ ಯಾತ್ರೆ ನಡೆಯಿತು. ಅಂತಿಮ ಯಾತ್ರೆಯಲ್ಲಿ ಲಕ್ಷಾಂತರ ಜನರು ಭಾಗಿಯಾದರು. ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ಇರಿಸಲಾಗಿದ್ದ ಶಾಮನೂರು ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ ಸೇರಿದಂತೆ ಪಕ್ಷಾತೀತವಾಗಿ ಬಂದು ಹಲವು ನಾಯಕರು ಅಂತಿಮ ದರ್ಶನ ಪಡೆದರು, ಮಠಾಧೀಶರು, ಕ್ರಿಶ್ಚಿಯನ್ ಧರ್ಮಗುರುಗಳು, ಮುಸ್ಲಿಂ ಮುಖಂಡರು ಹಿರಿಯ ನಾಯಕನ ಅಂತಿಮ ದರ್ಶನ ಪಡೆದರು.

Home add -Advt

ಬಳಿಕ ರಾಷ್ಟ್ರಧ್ವಜವನ್ನು ಪಾರ್ಥಿವ ಶರೂರದ ಮೇಲೆ ಹೊಡಿಸಿ ಸರ್ಕಾರಿ ಗೌರವ ಸಲ್ಲಿಸಲಾಯಿತು. ವೀರಶೈವ-ಲಿಂಗಾಯುತ ಸಂಪ್ರದಾಯದಂತೆ ಅಂತಿಮ ವಿಧಿ-ವಿಧಾನಗಳು ನೆರವೇರಿದವು. ಬಳಿಕ ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲಿಯೇ ಕ್ರಿಯಾ ಸಮಾಧಿಯಲ್ಲಿ ಮಣ್ಣು ಹಾಕದೇ ವಿಭೂತಿಗಳನ್ನಿಟ್ಟು, ಕಿಯಾ ವಿಧಾನ ನೆರವೇರಿಸಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಕರ್ನಾಟಕ ರಾಜಕಾರಣದ ಭೀಷ್ಮ, ಅಜಾತಶತೃ ಶಾಮನೂರು ಶಿವಶಂಕರಪ್ಪ ಇನ್ನು ನೆನಪು ಮಾತ್ರ.


Related Articles

Back to top button