Belagavi NewsBelgaum NewsKannada NewsKarnataka NewsNational

*ಮಕ್ಕಳ ಆಧಾರ ನವೀಕರಣಕ್ಕೆ ಉಚಿತ ಅವಕಾಶ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲೆಯ ಎಲ್ಲಾ ಆಧಾರ ಕೇಂದ್ರಗಳಲ್ಲಿ 5 ರಿಂದ 17 ವಯೋಮಿತಿಯ ಮಕ್ಕಳ ಆಧಾರ್ ಸಂಖ್ಯೆಗೆ ಕಡ್ಡಾಯ ಬಯೋಮೆಟ್ರಿಕ್ಸ್ ಅಫ್‌ಡೇಟ್‌ಗಾಗಿ (Mandatory Biometric Update) ಸೆಪ್ಟೆಂಬರ್ 30 2026 ರವರೆಗೆ ಉಚಿತವಾಗಿ ಅವಕಾಶ ಕಲ್ಪಿಸಲಾಗಿರುತ್ತದೆ.

ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಹಾಗೂ ಸಂಬಂಧಿಸಿದ ದಾಖಲೆಗಳೊಂದಿಗೆ ತಮ್ಮ ಹತ್ತಿರದ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ ನವೀಕರಣಿಸಿಕೊಳ್ಳಬಹುದಾಗಿದೆ. ಇದರಿಂದ ಮಕ್ಕಳ ಶಾಲೆಯ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ಸರ್ಕಾರದ ವಿವಿಧ ಯೋಜನೆಗಳು, ವಿದ್ಯಾರ್ಥಿವೇತನ, ತರಬೇತಿಗಳು ಸೇರಿದಂತೆ ಇತರೆ ಯೋಜನೆಗಳ ಲಾಭ ಪಡೆಯಲು ಅನುಕೂಲವಾಗಲಿದೆ.

Home add -Advt

ಜಿಲ್ಲೆಯ ಎಲ್ಲಾ ಪೋಷಕರು ಈ ಪ್ರಯೋಜನವನ್ನು ಜವಾಬ್ದಾರಿಯಿಂದ ಬಳಸಿಕೊಂಡು ತಮ್ಮ ಮಕ್ಕಳಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವಲ್ಲಿ ಪ್ರಮುಖ ಪಾತ್ರವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related Articles

Back to top button